ಮಂಡ್ಯ ವಿಧಾನಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶಾಸಕ ಗಣಿಗ ರವಿಕುಮಾರ್ ಶ್ರಮಿಸುತ್ತಿರುವುದನ್ನು ಪ್ರಶಂಸಿಸಿ ಅವರಿಗೆ ಕೀಲಾರ ಗ್ರಾಮಸ್ಥರು ಸಮಯ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು.
ಮಂಡ್ಯ ತಾಲ್ಲೂಕಿನ ಕೀಲಾರ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ 163 ಗ್ರಾಮಗಳಿಗೆ 120.96 ಕೋಟಿ ರೂ.ವೆಚ್ಚದ ಬಹು ಗ್ರಾಮ ಶುದ್ದ ಕುಡಿಯುವ ನೀರು ಸರಬರಾಜು ಯೋಜನೆಗೆ ಭೂಮಿ ಪೂಜೆ ಮಾಡಲು ಆಗಮಿಸಿದ ಶಾಸಕ ಗಣಿಗ ರವಿಕುಮಾರ್ ಅವರಿಗೆ ಕೀಲಾರ ಗ್ರಾಮದ ಮಹಿಳೆಯರು ಪೂರ್ಣ ಕುಂಭ ಸ್ವಾಗತ ಕೋರಿದರು.ಗ್ರಾಮಸ್ಥರು ಬೃಹತ್ ಸೇಬಿನ ಹಾರ ಹಾಕುವ ಮೂಲಕ ಅವರನ್ನು ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಶಾಸಕರು ಕಳೆದ ಎರಡೂವರೆ ವರ್ಷದ ಅವಧಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಕೀಲಾರ ಗ್ರಾಮಸ್ಥರು ಸಂತೋಷ ವ್ಯಕ್ತಪಡಿಸಿದರು.ಅಲ್ಲದೆ ಕೀಲಾರ ಸೇರಿದಂತೆ ಈ ಭಾಗದ ಅಭಿವೃದ್ಧಿಗೆ ನೂರಾರು ಕೋಟಿ ರೂ.ಗಳ ಅನುದಾನ ತಂದು ಅಭಿವೃದ್ಧಿ ಪಡಿಸುತ್ತಿರುವ ಶಾಸಕರ ಸೇವಾ ಕಾರ್ಯಗಳನ್ನು ಮೆಚ್ಚಿ ಅವರಿಗೆ ಕೀಲಾರದ ರುದ್ರೇಗೌಡರ ನೇತೃತ್ವದಲ್ಲಿ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿ ಸಮಯರತ್ನ ಪ್ರಶಸ್ತಿ ನೀಡಿ ಗೌರವಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರಾದ ರುದ್ರೇಗೌಡ, ಶಿವಶಂಕರ್, ಕೀಲಾರ ಕೃಷ್ಣ, ಕೀಲಾರ ಶಿವಮೂರ್ತಿ, ವಸಂತಕುಮಾರ್, ತ್ಯಾಗರಾಜು, ಶುಭದಯನಿ, ವೀಣಾ ಶಂಕರ್, ರಾಧಾ ಮತ್ತಿತರರು ಹಾಜರಿದ್ದರು.




