ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ಸೇವೆ, ಸಾಧನೆ, ಬಲಿದಾನ, ತ್ಯಾಗ ಇವುಗಳ ನೆನಪಿನ ಅಮೃತ ಮಹೋತ್ಸವ ನಮ್ಮಗಳ ಅಭಿಮಾನದ ಸಂಕೇತವೆಂದು ಮಾಜಿ ಸಚಿವ ಚೆಲುವರಾಯ ಸ್ವಾಮಿ ಅವರು ತಿಳಿಸಿದರು.
ನಾಗಮಂಗಲ ಪಟ್ಟಣದಲ್ಲಿಂದು 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಅಮೃತ ಮಹೋತ್ಸವ ಪಾದಯಾತ್ರೆಗೆ ಟಿ.ಬಿ ಬಡಾವಣೆ ಬಳಿ ಚಾಲನೆ ನೀಡಿ ಅವರು ಮಾತನಾಡಿದರು.ಪಟ್ಟಣದ ಮಿನಿ ವಿಧಾನಸೌಧದವರಿಗೆ ಪಾದಯಾತ್ರೆ ಮಾಡುವ ಮುಖಾಂತರ ಚಾಲನೆ ನೀಡಿದರು .
ರಾಷ್ಟ್ರ ಹಾಗೂ ರಾಜ್ಯ ನಾಯಕರ ತೀರ್ಮಾನದಂತೆ 75ನೇ ವರ್ಷದ ಸ್ವಾತಂತ್ರೋತ್ಸವದ ಅಂಗವಾಗಿ ಅಮೃತ ಮಹೋತ್ಸವವನ್ನು ರಾಜ್ಯದ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಆಚರಣೆ ಮಾಡಲಾಗುತ್ತಿದೆ.ಈ ಮುಖಾಂತರ ದೇಶಾಭಿಮಾನ, ಸ್ವಾತಂತ್ರ್ಯ ತಂದುಕೊಟ್ಟ ಮಹನೀಯರ ನೆನಪು ಮಾಡುವ ಮೂಲಕ ಪ್ರತಿಯೊಬ್ಬ ಪ್ರಜೆಯಲ್ಲಿಯೂ ಅಮೃತ ಮಹೋತ್ಸವದ ಬಗ್ಗೆ ಅಭಿಮಾನ ಮೂಡಿಸಿ ದೇಶಪ್ರೇಮ ಬೆಳೆಸಲು ಈ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದರು.
ಮಾಜಿ ಸಚಿವ ನರೇಂದ್ರ ಸ್ವಾಮಿ ಮಾತನಾಡಿ,ಈ ದೇಶಕ್ಕೆ ಸ್ವಾತಂತ್ರ್ಯ ತರುವಲ್ಲಿ ಕಾಂಗ್ರೆಸ್ ಪಕ್ಷದ ನಾಯಕರ ಕೊಡುಗೆ ಅಪಾರವಾಗಿದೆ.ಕಾಂಗ್ರೆಸ್ ಪಕ್ಷದ ಮಹನೀಯರ ಸಾಧನೆ ಹಾಗೂ ಅವರು ನೀಡಿದ ಸಂದೇಶವನ್ನು ಪ್ರತಿಯೊಬ್ಬ ಜನರಿಗೂ ಮುಟ್ಟುವ ರೀತಿಯಲ್ಲಿ ಸ್ವಾತಂತ್ರ್ಯೋತ್ಸವ ಹಬ್ಬ ರಾಜ್ಯದಲ್ಲೆಡೆ ನಡೆಯುವಂತಾಗಲಿ ಎಂದರು.

ಕಾಂಗ್ರೆಸ್ ಪಕ್ಷದ ಎಲ್ಲಾ ನಾಯಕರುಗಳನ್ನು ಒಗ್ಗೂಡಿಸುವ ಮುಖಾಂತರ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ರಾಜ್ಯದ ನಾಯಕರು ಶ್ರಮಿಸುತ್ತಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ನಮ್ಮೆಲ್ಲರ ನಾಯಕರಾದ ಚಲುವರಾಯಸ್ವಾಮಿಯವರ ಸಾರಥ್ಯದಲ್ಲಿ ಕಾಂಗ್ರೆಸ್ ಪಕ್ಷ ಜಿಲ್ಲೆಯಲ್ಲಿ ಕಾಂಗ್ರೆಸ್ ಪರ್ವ ಆರಂಭಿಸಿದ್ದು ನಿಮ್ಮೆ ಲ್ಲರ ಆಶೀರ್ವಾದದೊಂದಿಗೆ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಲು ಆಶೀರ್ವದಿಸಿ ಎಂದು ಮನವಿ ಮಾಡಿದರು.
ಟಿ.ಬಿ.ಬಡಾವಣೆಯಿಂದ ಆರಂಭಗೊಂಡ ಪಾದಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.ತಮಟೆ,ಪೂಜಾಕುಣಿತ ಸೇರಿದಂತೆ ವಿವಿಧ ಜಾನಪದ ಕಲಾವಿದರು ಪಾದಯಾತ್ರೆಯಲ್ಲಿ ಭಾಗವಹೊಸಿದ್ದರು.
ಸಾವಿರಾರು ಕಾರ್ಯಕರ್ತರು ಕೈಯಲ್ಲಿ ಕಾಂಗ್ರೆಸ್ ಪಕ್ಷದ ಧ್ಜಜಗಳನ್ನು ಹಿಡಿದು ಜಯಕಾರ ಹಾಕುತ್ತಾ ಮುನ್ನಡೆದರು.
ಇದೇ ಸಂದರ್ಭದಲ್ಲಿ ಮಾಜಿ ಶಾಸಕರುಗಳಾದ ಕೆ.ಬಿ. ಚಂದ್ರಶೇಖರ್, ರಮೇಶ್ ಬಾಬು ಬಂಡಿಸಿದ್ದೇಗೌಡ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್ ಹಾಗೂ ಕಾಂಗ್ರೆಸ್ ಮುಖಂಡರುಗಳು ಹಾಗೂ ಕಾಂಗ್ರೆಸ್ ಘಟಕದ ಅಧ್ಯಕ್ಷರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.




