Sunday, November 22, 2026

ಪ್ರಾಯೋಗಿಕ ಆವೃತ್ತಿ

ಸಾಮಾಜಿಕ ಬಹಿಷ್ಕಾರ ನಿಷೇಧ : ಶಿಕ್ಷೆ ಪ್ರಮಾಣ ಹೆಚ್ಚಿಸಲು ಆಗ್ರಹ

ಸಾಮಾಜಿಕ ಬಹಿಷ್ಕಾರ ನಿಷೇಧ ನಿಧೇಯಕದ ಅಡಿ ಶಿಕ್ಷೆ ಪ್ರಮಾಣ ೭ ವರ್ಷಕ್ಕೆ ಹೆಚ್ಚಿಸಬೇಕು, ಎಸ್ಸಿ/ಎಸ್ಟಿ ಸಮುದಾಯ ಪ್ರತಿ ಕುಟುಂಬಕ್ಕೆ ತಲಾ ೨೫ ಲಕ್ಷ ರೂ. ವಿಶೇಷ ಅನುದಾನ ಮೀಸಲಿಡಲು ಸರ್ಕಾರ ಮುಂದಾಗಬೇಕು ಎಂದು ಕದಸಂಸ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ ಆಗ್ರಹಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿವಿಧ ಕಾರಣಗಳಿಗೆ ಗುರಿಯಾಗಿರಿಸಿಕೊಂಡು ಸಮಾಜದಿಂದ ಹಾಗೂ ಹಳ್ಳಿಗಳಿಂದ ಬಹಿಷ್ಕಾರ ಪದ್ಧತಿ ಅಪರಾಧ ಎಂದು ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನದಲ್ಲಿ ಕರ್ನಾಟಕ ಸಾಮಾಜಿಕ ಬಹಿಷ್ಕಾರ ವಿಧೇಯ ಜಾರಿ ಮಾಡುತ್ತಿದ್ದು, ಶಿಕ್ಷೆಯ ಪ್ರಮಾಣವನ್ನು ೩ ವರ್ಷದಿಂದ ೭ ವರ್ಷಕ್ಕೆ ಹೆಚ್ಚಿಸಬೇಕು ಎಂದರು.

ಸಮಾಜಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಅವರು ಚಳಿಗಾಲದ ಅಧಿವೇಶನದಲ್ಲಿ ೨೦೨೩ರಿಂದ ಇಲ್ಲಿಯವರೆಗೆ ೩ ವರ್ಷಗಳಲ್ಲಿ ೨೫ ಸಾವಿರ ಕೋಟಿ ಎಸ್ಸಿಪಿ & ಟಿಎಸ್ಪಿ ಅನುದಾನವನ್ನು ಗ್ಯಾರೆಂಟಿ ಯೋಜನೆಗಳಿಗೆ ಬಳಸಲಾಗಿದೆ ಎಂದಿದ್ದು. ೨೦೧೩ರಿಂದ ಇಲ್ಲಿವರೆಗೆ ೨ ಲಕ್ಷ ಕೋಟಿ ರೂ ಅನುದಾನವನ್ನು ಅನ್ಯ ಯೋಜನೆಗಳಿಗೆ ಬಳಸಲಾಗಿದೆ. ಮುಂದಿನ ಬಜೆಟ್‌ನಲ್ಲಿ ಪ್ರತಿ ಎಸ್ಸಿ&ಎಸ್ಟಿ ಕುಟುಂಬಗಳಿಗೆ ತಲಾ ೨೫ ಲಕ್ಷ ರೂ ವಿಶೇಷ ಅನುದಾನ ಘೋಷಿಸಬೇಕು. ಹಾಗೆಯೇ ಎಸ್ಸಿಪಿ & ಟಿಎಸ್ಪಿ ಹಣ ಬಳಕೆಗೆ ಅನುಕೂಲಕ ಮಾಡಿಕೊಡುವ ೭(ಸಿ) ಕಾಲಂ ಅನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.

ಸರ್ಕಾರಿ, ಅರೆಸರ್ಕಾರಿ, ಖಾಸಗಿ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಋತುಚಕ್ರ ವೇತನ ಸಹಿತ ರಜೆ ನೀಡಲಾಗುತ್ತಿದೆ. ಅಂತೆಯೇ ರೈತ, ಕೃಷಿ ಕೂಲಿ ಕಾರ್ಮಿಕ ಮಹಿಳೆಯರಿಗೂ ಋತುಚಕ್ರ ರಜೆ ಸಹಿತ ಕೂಲಿ ನೀಡುವ ನಿರ್ಧಾರ ಮಾಡಬೇಕು. ಇಲ್ಲವಾದಲ್ಲಿ ಮಹಿಳೆಯರಿಂದಲೇ ಮುಖ್ಯಮಂತ್ರಿ ಹಾಗೂ ಎಲ್ಲಾ ಮಂತ್ರಿಗಳಿಗೆ ಕಂಡಕಂಡಲ್ಲಿ ಮಹಿಳೆಯರಿಂದಲೇ ಘೇರಾವ್ ಮಾಡಲಾಗುವುದು ಎಂದು ಎಚ್ಚರಿಸಿದರು.

ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಬಿ.ಆನಂದ್, ಮಹಿಳಾ ಜಿಲ್ಲಾಧ್ಯಕ್ಷೆ ಸುಶ್ಮಿತ ಆನಂದ್, ಜಿಲ್ಲಾ ಸಂಘಟನ ಕಾರ್‍ಯದರ್ಶಿ ನಾಗರಾಜ್ ಈಚಗೆರೆ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ