Sunday, November 22, 2026

ಪ್ರಾಯೋಗಿಕ ಆವೃತ್ತಿ

ನಾನೂ ಕೂಡ ಸಿಎಂ ಆಕಾಂಕ್ಷಿ ಎಂದು ಅಂದಿದ್ಯಾರು ಗೊತ್ತಾ…?

ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಅಧಿಕಾರಕ್ಕೆ ಬರಲಿದ್ದು,ತಾನು ಕೂಡ ಮುಖ್ಯಮಂತ್ರಿ ಸ್ಥಾನದ ಅಕಾಂಕ್ಷಿ ಎಂದು ಅರಣ್ಯ ಮತ್ತು ಆಹಾರ ನಾಗರೀಕ ಪೂರೈಕೆ ಸಚಿವ ಉಮೇಶ್ ವಿ.ಕತ್ತಿ ತಿಳಿಸಿದರು.

ಮಳವಳ್ಳಿ ತಾಲ್ಲೂಕಿನ ಶಿವನಸಮುದ್ರದ ಗಗನಚುಕ್ಕಿ ಜಲಪಾತವನ್ನು ವೀಕ್ಷಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಾಪೋಹವಾಗಿದೆ. ಮುಖ್ಯಮಂತ್ರಿ ಬಸವರಾಜು ಬೊಮ್ಮಯಿ ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆಯನ್ನು ಎದುರಿಸಲಿದ್ದೇವೆಂದು ಹೇಳಿದರು.

ತಾನು ಕೂಡ 8 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ.ಹಲವು ಖಾತೆಗಳ ಸಚಿವವಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಮುಖ್ಯಮಂತ್ರಿಯಾಗಿ ನಾಡಿನ ಜನರ ಸೇವೆ ಸಲ್ಲಿಸುವ ಹಂಬಲ ಹೊಂದಿದ್ದೇನೆಂದು ತಿಳಿಸಿದರು.

ಯಡಿಯೂರಪ್ಪ ಅವರು ಬಿಜೆಪಿ ಹಿರಿಯ ನಾಯಕರಾಗಿದ್ದಾರೆ. ಅವರನ್ನು ಎಂದಿಗೂ ಕಡೆಗಣಿಸಿಲ್ಲ ಎಂದರು.
ಮೇಕೆದಾಟು ಯೋಜನೆಯನ್ನು ಜಾರಿ ಮಾಡಲು ತಮಿಳುನಾಡು ಸರ್ಕಾರ ಅವಕಾಶ ಮಾಡಿಕೊಡಬೇಕು. ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿರುವುದರಿಂದ ಮೇಕೆದಾಟು ಯೋಜನೆ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದೆಂದು ಹೇಳಿದರು.

ಇದೇ ಸಂದರ್ಭದಲ್ಲಿ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಯು.ಪಿ ಸಿಂಗ್, ಉಪ ಸಂರಕ್ಷಣಾ ಅಧಿಕಾರಿಗಳಾದ ನಂದೀಶ್. ಏಳುಕುಂಡಲು, ಸಂತೋಷ್ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿ ನಾಗೇಂದ್ರ ಪ್ರಸಾದ್, ವಲಯ ಅರಣ್ಯ ಅಧಿಕಾರಿ ಎನ್.ಸಿ ಮಹದೇವು, ಆಹಾರ ಇಲಾಖೆ ಉಪನಿರ್ದೇಶಕರಾದ ಎಂ.ಪಿ. ಕುಮಾರ್, ಯೋಗಾನಂದ್,ಕಾನೂನು ಮಾಪನ ಇಲಾಖೆ ಸಹಾಯಕ ನಿಯಂತ್ರಕ ಕೆ.ಎಂ ಮಹದೇವಸ್ವಾಮಿ ಸೇರಿದಂತೆ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ