ಮಂಡ್ಯ ಹೊರವಲಯದ ಶಶಿಕಿರಣ ಕನ್ವೆನ್ಷನ್ ಹಾಲ್ ಬಳಿ ಎನ್ಹೆಚ್ – 275ರ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ಸ್ವಾಗತ ಕಮಾನಿಗೆ ಡಿಕ್ಕಿ ಹೊಡೆದು ಓರ್ವ ಮಹಿಳೆ ಸಾವಿಗೀಡಾಗಿ, ನಾಲ್ವರು ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಅಪಘಾತದಲ್ಲಿ ಆಂಧ್ರ ಪ್ರದೇಶದವರಾದ ದಿವ್ಯಾ (26) ಎಂಬ ಮಹಿಳೆ ಸಾವಿಗೀಡಾಗಿದ್ದಾರೆ. ಇವರು ಕಾರಿನ ಮೂಲಕದ ಊಟಿಗೆ ತೆರಳುತ್ತಿದ್ದರು. ಘಟನೆಯಲ್ಲಿ ಕಾರಿನ ಚಾಲಕ ಸೇರಿದಂತೆ ಒಟ್ಟು 4 ಜನ ಗಾಯಗೊಂಡಿದ್ದು, ಅವರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಮಂಡ್ಯ ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲಿಸಿದರು. ಈ ಬಗ್ಗೆ ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




