Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | 2 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕರ ಭೂಮಿಪೂಜೆ

ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಂಟಗೌಡನಹಳ್ಳಿ ಗ್ರಾಮದಿಂದ ದ್ಯಾಪಸಂದ್ರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ 2 ಕೋಟಿ ರೂ. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರವಿಕುಮಾರ್ ಗೌಡ  ಶನಿವಾರ ಗುದ್ದಲಿಪೂಜೆ ಮಾಡಿದರು.

ಹಲವು ವರ್ಷಗಳಿಂದ ಗುಂಡಿ ಬಿದ್ದು ಸಾರ್ವಜನಿಕರ ಸಂಚಾರಕ್ಕೆ ಅನಾನುಕೂಲವಾಗಿದ್ದನ್ನು ಗಮನಿಸಿ ಶಾಸಕರು, ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗ್ರಾಮಸ್ಥರೊಡನೆ ಭೂಮಿ ಪೂಜೆ ನೆರವೇರಿಸಿ ಗ್ರಾಮಸ್ಥರ ಅಭಿನಂದನೆ ಸ್ವೀಕರಿಸಿದರು.

ಈ ರಸ್ತೆ ಅಭಿವೃದ್ಧಿಯಿಂದ ಗಂಟಗೌಡನಹಳ್ಳಿ -ದ್ಯಾಪಸಂದ್ರ ಹಾಗೂ ಸುತ್ತಸುತ್ತ ಮುತ್ತಲ ಗ್ರಾಮಸ್ಥರು ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ