Saturday, November 21, 2026

ಪ್ರಾಯೋಗಿಕ ಆವೃತ್ತಿ

ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ವಿರೋಧಿಸಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ವಿರೋಧಿಸಿ ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ದ ಘೋಷಣೆ ಕೂಗಿದರು. ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕವು ನಾಗರೀಕರ ಮೂಲ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಸಂವಿಧಾನದ 19 (1) ಪರಿಚ್ಛೇದ, (2) ಪರಿಚ್ಛೇದದಡಿ ವಾಕ್ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆಯಾಲಿದೆ ಎಂದು ದೂರಿದರು.

ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯವನ್ನು ಹೇಳುವುದನ್ನೂ ಕೂಡ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ. ಜನರು ಭಯದಿಂದ ಮಾತನಾಡದೆ ಇರುವುದು ಸರ್ಕಾರದ ಉದ್ದೇಶವೇ ಎಂಬ ಪ್ರಶ್ನೆ ಮೂಡುತ್ತಿದೆ. ಇದು ಪ್ರಜಾಪ್ರಭುತ್ವದ ಮೂಲತತ್ವಕ್ಕೆ ಹಾನಿ; ಮಾತ್ರವಲ್ಲ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನ. ಈ ಕಾನೂನು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ನಿರಂಕುಶ ಅಧಿಕಾರ ನೀಡುತ್ತದೆ ಎಂದು ದೂರಿ, ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ವಿವೇಕ್, ವಸಂತ್ ಕುಮಾರ್, ಸಿ.ಟಿ.ಮಂಜುನಾಥ್ ಮತ್ತಿತರರಿದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ