Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮೈಸೂರು ಅರಮನೆ ಬಳಿ ಸಿಲಿಂಡರ್ ಸ್ಫೋಟ : ಓರ್ವ ಸಾವು

ಮೈಸೂರಿನ ಅರಮನೆ ಬಳಿ ಸಿಲಿಂಡರ್ ಸ್ಫೋಟಗೊಂಡಿದೆ. ಓರ್ವ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ. ಗುರುವಾರ ರಾತ್ರಿ ಘಟನೆ ನಡೆದಿದೆ. ಅಂಬಾವಿಲಾಸ ಅರಮನೆ ಆವರಣದ ಜಯಮಾರ್ತಾಂಡ ದ್ವಾರದ ಬಳಿ ಬಲೂನ್ ಮಾರಾಟ ಮಾಡುತ್ತಿದ್ದ ವ್ಯಾಪಾರಿಯು ನೈಟ್ರೋಜನ್‌ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಪೋಟಗೊಂಡಿದೆ.

ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದಾರೆ. ಒಟ್ಟು ನಾಲ್ಕು ಮಂದಿ ಗಂಭೀರವಾಹಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಗಾಯಾಳುಗಳನ್ನು ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅರಮನೆಯಲ್ಲಿ ಮಾಗಿ ಉತ್ಸವ ನಡೆಯುತ್ತಿದ್ದು, ಇದಕ್ಕಾಗಿ ಅರಮನೆಗೆ ದೀಪಾಲಂಕಾರ ಮಾಡಲಾಗಿತ್ತು. ಪ‍್ರವಾಸಿಗರು ಹೆಚ್ಚಿದ್ದರಿಂದ, ಬಲೂನ್ ವ್ಯಾಪಾರಿ ಅರಮನೆ ದ್ವಾರದ ಬಳಿ ಬಲೂನ್ ಮಾರಾಟ ಮಾಡುತ್ತಿದ್ದರು. ಆತ ಗ್ಯಾಸ್‌ ಸಿಲಿಂಡರ್‌ ಒಡೆದು ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ