ಮಂಡ್ಯ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಅರ್ಕೇಶ್ವರನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವತಿಯಿಂದ ವಿಶ್ವಮಾನವ ದಿನಾಚರಣೆಯನ್ನು ಡಿಸೆಂಬರ್ 29 ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯ ಅರ್ಕೇಶ್ವರನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಆರ್.ಎ.ಪಿ.ಸಿ.ಎಸ್ ಆವರಣದಲ್ಲಿರುವ ಕುವೆಂಪುರವರ ಪ್ರತಿಮೆಗೆ ಬೆಳಿಗ್ಗೆ 9 ಗಂಟೆಗೆ ಮಾಲಾರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ .ಕುಮಾರಸ್ವಾಮಿ ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸಲಿದ್ದಾರೆ. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸುವರು.

ಶ್ರೀಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಅಧ್ಯಕ್ಷ ಹಾಗೂ ಶಾಸಕ ಎ.ಬಿ ರಮೇಶ ಬಂಡಿಸಿದ್ದೇಗೌಡ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಪಿ ಎಂ ನರೇಂದ್ರಸ್ವಾಮಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯದಿನೇಶ್ ಗೂಳಿಗೌಡ ಅವರು ಕಾರ್ಯಕ್ರಮದ ಗೌರವ ಉಪಸ್ಥಿತಿ ವಹಿಸಲಿದ್ದಾರೆ. ಶಾಸಕ ಪಿ.ರವಿಕುಮಾರ್ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕರಾದ ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ವಿಧಾನಸಭಾ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ಹೆಚ್.ಟಿ ಮಂಜು, ಕೆ.ಎಂ ಉದಯ, ರಾಜ್ಯ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್ ಆತ್ಮಾನಂದ, ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷರಾದ ಡಾ. ಮೂರ್ತಿ, ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ.ಹೆಚ್.ಕೃಷ್ಣ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಮೈಸೂರು ಸಕ್ಕರೆ ಕಂಪನಿ ನಿಯಮಿತ ಅಧ್ಯಕ್ಷರಾದ ಸಿ.ಡಿ ಗಂಗಾಧರ ಭಾಗವಹಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಿ.ಬಸವೇಗೌಡ ಭಾಗವಹಿಸಲಿದ್ದಾರೆ ಹಾಗೂ ಉಪನ್ಯಾಸಕರು ಮತ್ತ ಕವಿಗಳಾದ ಕೆ.ಪಿ ಮೃತ್ಯುಂಜಯ ಅವರು ಉಪನ್ಯಾಸ ನೀಡಲಿದ್ದಾರೆ.




