Monday, November 23, 2026

ಪ್ರಾಯೋಗಿಕ ಆವೃತ್ತಿ

ಬುಲ್ಡೋಜರ್ ನ್ಯಾಯಕ್ಕೂ, ಅಕ್ರಮ ಒತ್ತುವರಿ ತೆರವಿಗೂ ಅಜಗಜಾಂತರ ವ್ಯತ್ಯಾಸವಿದೆ : ಸಿಎಂ ಸಿದ್ದರಾಮಯ್ಯ

ಬುಲ್ಡೋಜರ್ ನ್ಯಾಯಕ್ಕೂ, ಅಕ್ರಮ ಒತ್ತುವರಿ ತೆರವಿಗೂ ಅಜಗಜಾಂತರ ವ್ಯತ್ಯಾಸವಿದೆ. ಪಿಣರಾಯಿ ವಿಜಯನ್ ಅವರು ವಾಸ್ತವ ಸಂಗತಿಗಳ ಅರಿವಿಲ್ಲದೆ ರಾಜಕೀಯ ಕಾರಣಕ್ಕಾಗಿ ಟೀಕೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಯಲಹಂಕ ಸಮೀಪದ ಕೋಗಿಲು ಬಡಾವಣೆಯ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಹಲವರು ಅತಿಕ್ರಮವಾಗಿ ಗುಡಿಸಲು ನಿರ್ಮಿಸಿಕೊಂಡಿದ್ದರು, ಅದು ಜನ ವಸತಿಗೆ ಯೋಗ್ಯವಾದ ಸ್ಥಳವಾಗಿರಲಿಲ್ಲ. ಅಲ್ಲಿನ ಕುಟುಂಬಗಳಿಗೆ ಹಲವು ಬಾರಿ ಬೇರೆಡೆಗೆ ಸ್ಥಳಾಂತರ ಆಗುವಂತೆ ನೋಟೀಸ್ ನೀಡಿದ್ದರೂ ಅವರು ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಅವರನ್ನು ಆ ಜಾಗದಿಂದ ತೆರವುಗೊಳಿಸಲಾಗಿದೆ ಎಂದು ಅವರು ‘ಎಕ್ಸ್’ ನಲ್ಲಿ ಬರೆದುಕೊಂಡಿದ್ದಾರೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಮಿಷನರ್ ಅವರ ಜೊತೆ ಮಾತನಾಡಿ, ಅವರೆಲ್ಲರಿಗೂ ತಾತ್ಕಾಲಿಕ ಆಶ್ರಯ, ಊಟ ಇನ್ನಿತರೆ ವ್ಯವಸ್ಥೆ ಮಾಡಿಕೊಡುವಂತೆ ಸೂಚನೆ ನೀಡಿದ್ದೇನೆ. ಅಲ್ಲಿ ಅತಿಕ್ರಮವಾಗಿ ವಾಸವಿದ್ದ ಬಹುತೇಕರು ವಲಸೆ ಕಾರ್ಮಿಕರು, ಸ್ಥಳೀಯ ನಿವಾಸಿಗಳಲ್ಲ, ಆದರೂ ಕೂಡ ಮಾನವೀಯತೆ ದೃಷ್ಟಿಯಿಂದ ಅವರಿಗೆ ಸೂಕ್ತ ವಸತಿ ವ್ಯವಸ್ಥೆ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ