Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಯಾವುದೇ ಕಂಪನಿಯಿಂದ ಅರ್ಜಿ ಬಂದರೂ ಸಂಪೂರ್ಣ ಸಹಕಾರ : ಚಲುವರಾಯಸ್ವಾಮಿ

ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ ಅರ್ಜಿ ಸಲ್ಲಿಸಲಿ ಕೈಗಾರಿಕೆ ಸ್ಥಾಪನೆಗೆ ನಮ್ಮ ಸರ್ಕಾರ ಜಿಲ್ಲೆಯ ಶಾಸಕರು ಬೆಂಬಲ ನೀಡುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಹೇಳಿದರು.

ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶಾಸಕ ರವಿಕುಮಾರ್ ಅವರು ಕೈಗಾರಿಕೆ ಸ್ಥಾಪನೆಗೆ 90 ಎಕ್ಕರೆ ಜಾಗವನ್ನು ಈಗಾಗಲೇ ಗುರುತಿಸಿದ್ದಾರೆ. ನಮಗೆ ಯಾವುದೇ ಕಂಪನಿಯಿಂದ ಕೈಗಾರಿಕೆ ಸ್ಥಾಪನೆ ಮಾಡಲು ಅರ್ಜಿ ಬಂದಿಲ್ಲ ಎಂದು ಹೇಳಿದರು.

ಯಾವುದೇ ಕೈಗಾರಿಕಾ ಸಂಸ್ಥೆಯಿಂದ ಅರ್ಜಿ ಬಂದರೆ, 15 ದಿನದೊಳಗಾಗಿ ಹೆಚ್ ಡಿ ಕುಮಾರಸ್ವಾಮಿ ಅವರನ್ನು ಕರೆದು ಸಭೆ ನಡೆಸಲಾಗುವುದು. ಅರ್ಜಿ ಬಾರದೆ ಹೇಗೆ ಸಭೆ ನಡೆಸಲು ಸಾಧ್ಯ ಎಂದು ತಿಳಿಸಿದರು.

ಸಭೆಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಎಂ.ಪಿ ನರೇಂದ್ರ ಸ್ವಾಮಿ, ಶಾಸಕ ದಿನೇಶ್ ಗೂಳಿಗೌಡ, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧಿಕಾರಿ ಕೆ.ಆರ್ ನಂದಿನಿ, ಪೋಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡೆ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ