Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ ಜಿಲ್ಲಾ ನೂತನ ಪೊಲೀಸ್ ವರಿಷ್ಟಾಧಿಕಾರಿ ಶೋಭಾರಾಣಿ

ಮಂಡ್ಯ ಜಿಲ್ಲಾ ನೂತನ ಪೊಲೀಸ್‌ ವರಿಷ್ಠಾಧಿಕಾರಿಯನ್ನಾಗಿ ಬಳ್ಳಾರಿಯಲ್ಲಿ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶೋಭಾರಾಣಿ ವಿ.ಜೆ. ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶೋಭರಾಣಿ ಅವರು 2016ರ ಬ್ಯಾಚ್‌ನ ಅಧಿಕಾರಿಯಾಗಿದ್ದು, ಮಂಡ್ಯ ಜಿಲ್ಲೆಯಲ್ಲಿ ಡಿವೈಎಸ್ಪಿ ಮತ್ತು ಹೆಚ್ಚುವರಿ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಮಂಡ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನ ಬಾಲದಂಡಿ ಅವರನ್ನು ಮೈಸೂರು ಜಿಲ್ಲೆ ಎಸ್ಪಿಯಾಗಿ ವರ್ಗಾವಣೆಗೊಳಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

2016ರ ಐಪಿಎಸ್ ಬ್ಯಾಚ್ ಅಧಿಕಾರಿಯಾದ ಮಲ್ಲಿಕಾರ್ಜುನ ಬಾಲದಂಡಿ ಅವರು ರೌಡಿಸಂ ಕೃತ್ಯಗಳ ನಿಯಂತ್ರಣ, ರೌಡಿಗಳ ಗಡೀಪಾರು, ಅಪರಾಧ ನಿಯಂತ್ರಣ ಮತ್ತು ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2024ರ ಜುಲೈ 3ರಂದು ಮಂಡ್ಯ ಎಸ್ಪಿಯಾಗಿ ವರ್ಗಾವಣೆಗೊಂಡು, ಕಳೆದ ಒಂದೂವರೆ ವರ್ಷದಿಂದ ಇಲಾಖೆಯನ್ನು ‘ಜನಸ್ನೇಹಿ ಪೊಲೀಸ್’ ಮಾಡುವಲ್ಲಿ ಶ್ರಮಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ