ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ್ ಅರಸು ಅವರು ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ದಾಖಲೆ ಸರಿಗಟ್ಟಲು ಜನರ ಆಶೀರ್ವಾದವೇ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ತಾಲ್ಲೂಕು ಬೋರ್ಡ್ ಸದಸ್ಯನಾದ ನಂತರದ ನನ್ನ ರಾಜಕೀಯ ಜೀವನದಲ್ಲಿ ಸಚಿವನಾಗುವ ಮತ್ತು ಮುಖ್ಯಮಂತ್ರಿಯಾಗುವ ನಿರೀಕ್ಷೆಯಿರಲಿಲ್ಲ. 13 ಚುನಾವಣೆಗಳನ್ನೂ ಎದುರಿಸಿ 9 ಬಾರಿ ಗೆಲುವು ಸಾಧಿಸಿದ್ದೇನೆ. ಕಡಿಮೆ ಜನಸಂಖ್ಯೆಯ ಅರಸು ಸಮುದಾಯದವರಾಗಿದ್ದ ದೇವರಾಜ ಅರಸು ಅವರು ಜನಪ್ರಿಯ ನಾಯಕರಾಗಿದ್ದರು. ಅಂತಹ ಮಹಾನ್ ನಾಯಕನಿಗೂ ಮತ್ತು ನನಗೂ ಹೋಲಿಕೆ ಸರಿಯಲ್ಲ. ಅರಸು ಅವರ ಅವಧಿಯಲ್ಲಿ ರಾಜ್ಯದ ಪರಿಸ್ಥಿತಿ ವಿಭಿನ್ನವಾಗಿತ್ತು. ಅವರು ಒಂದು ಬಾರಿ ಅವಿರೋಧವಾಗಿಯೂ ಆಯ್ಕೆಯಾಗಿದ್ದರು ‘ಎಕ್ಸ್’ನಲ್ಲಿ ಸ್ಮರಿಸಿದ್ದಾರೆ
ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ. ಪ್ರಸ್ತುತ ನಾನು ಪೂರೈಸಲಿರುವ ಅವಧಿಯನ್ನು ಮೀರಲಿರುವ ಮತ್ತೊಬ್ಬ ನಾಯಕರೂ ಮುಂದೆ ಬರಬಹುದು. ನನಗಿಂತ ಹೆಚ್ಚಿನ ಬಾರಿ ಬಜೆಟ್ ಮಂಡಿಸುವ ನಾಯಕರೂ ಮುಂದೆ ಬರಬಹುದು ಎಂದು ತಿಳಿಸಿದ್ದಾರೆ.




