Tuesday, November 24, 2026

ಪ್ರಾಯೋಗಿಕ ಆವೃತ್ತಿ

“ದ್ವೇಷ ಭಾಷಣ ಪ್ರತಿಬಂಧಕ ಮಸೂದೆಯನ್ನು ರಾಜ್ಯಪಾಲರು ತಿರಸ್ಕರಿಸಿಲ್ಲ”: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಇದನ್ನು ವಾಪಸ್ಸು ಕಳಿಸಿಲ್ಲ, ತಿರಸ್ಕರಿಸಿಯೂ ಇಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಮಸೂದೆಯ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಳ್ಳಾರಿಯಲ್ಲಿ ಕಾನೂನುಬಾಹಿರ ಗಣಿಗಾರಿಕೆ ಮಾಡುತ್ತಿರುವ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ಮಾಡಿದಾಗ ರೆಡ್ಡಿ ಸಹೋದರರು ಹಾಗೂ ಯಡಿಯೂರಪ್ಪ ಅವರು ತಾಕತ್ತಿದ್ದರೆ ಬಳ್ಳಾರಿಗೆ ಬರುವಂತೆ ಸವಾಲು ಹಾಕಿದ್ದರು. ಅದಕ್ಕಾಗಿ ಪಾದಯಾತ್ರೆ ಕೈಗೊಳ್ಳಲಾಯಿತು. ಬಿಜೆಪಿ ಪಕ್ಷ ಪಾದಯಾತ್ರೆ ಮಾಡುವ ಅಗತ್ಯ ಏನಿದೆ? ಎಂದು ಪ್ರಶ್ನಿಸಿದರು.

ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಉದ್ಘಾಟನೆ ಬಗ್ಗೆ ಹಾಕಿದ್ದ ಬ್ಯಾನರನ್ನು ತೆಗೆಯಬೇಕಾದ ಅಗತ್ಯವೇನಿತ್ತು? ಅದನ್ನು ತೆಗೆದದ್ದೆ ಘಟನೆಗೆ ಕಾರಣವಾಯಿತು. ಜನಾರ್ದನ ರೆಡ್ಡಿ, ಶ್ರೀರಾಮುಲು ಅವರು ಸ್ಥಾನ ಕಳೆದುಕೊಂಡಿದ್ದರ ಮೇಲಿನ ಅಸೂಯೆಯಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ