Tuesday, November 24, 2026

ಪ್ರಾಯೋಗಿಕ ಆವೃತ್ತಿ

ಧರ್ಮಸ್ಥಳದಲ್ಲಿ 74 ಅಸಹಜ ಸಾವುಗಳು : ಸರ್ಕಾರಕ್ಕೆ ನೋಟಿಸ್ ನೀಡಿದ ಹೈಕೋರ್ಟ್‌

ಧರ್ಮಸ್ಥಳದಲ್ಲಿ ಸಂಭವಿಸಿರುವ 74 ಅಸಹನ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್‌ಐಆರ್ ದಾಖಲಿಸಿರುವ ವಿಚಾರವಾಗಿ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ನೀಡಿದೆ. ಸರ್ಕಾರವು ನ್ಯಾಯಾಲಯದಲ್ಲಿ ಇರುವ ದಾಖಲೆಗಳನ್ನು ಪಡೆದುಕೊಂಡು, ಅಭಿಪ್ರಾಯ ತಿಳಿಸುವಂತೆ ಸೂಚಿಸಿದೆ.

ಸೌಜನ್ಯ ತಾಯಿ ಕುಸುಮಾವತಿ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, “ಧರ್ಮಸ್ಥಳದಲ್ಲಿ ಘಟಿಸಿರುವ 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್‌ಐಆರ್ ದಾಖಲಿಸಬೇಕು ಮತ್ತು ಎಸ್‌ಐಟಿ ತನಿಖೆಗೆ ಸೂಚಿಸಬೇಕು” ಎಂದು ಮನವಿ ಮಾಡಿದ್ದರು.

ಅವರ ಅರ್ಜಿಯನ್ನು ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿ ವಲ್ಲೂರಿ ಕಾಮೇಶ್ವರ್ ರಾವ್ ಅವರ ಪೀಠವು ಆಲಿಸಿದೆ. ನ್ಯಾಯಾಲಯದಲ್ಲಿ ಕುಸುಮಾವತಿ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಎಸ್‌ ಬಾಲನ್, “ಧರ್ಮಸ್ಥಳದ ಪೋಲೀಸ್ ಠಾಣಾ ವ್ಯಾಪ್ತಿಯೊಂದರಲ್ಲೇ 74 ಅಸಹಜ ಸಾವುಗಳು ನಡೆದಿರುವುದಾಗಿ ವರದಿಯಾಗಿದೆ. ಈ ಪ್ರಕರಣಗಳ ತನಿಖೆ ಮಾಡಲೆಂದೇ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ಆದರೆ, ಎಸ್ಐಟಿ ಕೇವಲ ಒಂದು ಎಫ್ಐಆರ್ ದಾಖಲಿಸಿದೆ. ಉಳಿದ 74 ಕೊಲೆ, ನಾಪತ್ತೆ, ಸಾವು ಪ್ರಕರಣಗಳಿಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿಲ್ಲ. ಇದು ಸರಿಯಾದ ಕ್ರಮವಲ್ಲ” ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.

ಅವರ ವಾದ ಪ್ರತಿವಾದ ಂಡಿಸಿದ ಸರ್ಕಾರದ ಪರ ವಕೀಲರು, “ಸರ್ಕಾರಕ್ಕೆ ಇನ್ನೂ ಪ್ರಕರಣದ ದಾಖಲೆಗಳನ್ನು ಸಲ್ಲಿಸಿಲ್ಲ. ದಾಖಲೆ ಇಲ್ಲದೇ ಸರ್ಕಾರ ಅಭಿಪ್ರಾಯ ಹೇಳಲು ಹೇಗೆ ಸಾಧ್ಯ?” ಎಂದಿದ್ದಾರೆ.

ವಾದ-ಪ್ರತಿವಾದ ಆಲಿಸಿದ ಪೀಠವು, “ಪ್ರಕರಣ ಇರುವುದು 74 ಅಸಹಜ ಸಾವುಗಳಿಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿಲ್ಲ ಎಂಬುದರ ಕುರಿತು. ಸರ್ಕಾರವು ನ್ಯಾಯಾಲಯದಲ್ಲಿ ಲಭ್ಯವಿರುವ ದಾಖಲೆಯನ್ನೇ ಪಡೆದುಕೊಂಡು ಅಭಿಪ್ರಾಯ ಸಲ್ಲಿಸಬೇಕು” ಎಂದು ಸೂಚಿಸಿದ್ದಾರೆ. ಅರ್ಜಿ ವಿಚಾರಣೆಯನ್ನು ಫೆಬ್ರವರಿ 03ಕ್ಕೆ ಮಂದೂಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ