Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಆಸ್ತಿಗಾಗಿ ಜಗಳ : ಅಣ್ಣನಿಂದಲೇ ತಮ್ಮನ ಕೊಲೆ

ಆಸ್ತಿಗಾಗಿ ಜಗಳ ನಡೆದು ತಮ್ಮನನ್ನೇ ಅಣ್ಣನೊಬ್ಬ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಂಡ್ಯ ತಾಲ್ಲೂಕಿನ ಕೆರಗೋಡು ಸಮೀಪದ ಮಾಯಣ್ಣನಕೊಪ್ಪಲು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ.

ಯೋಗೇಶ್ (35) ಎಂಬಾತ ಕೊಲೆಯಾಗಿದ್ದು, ಈತನನ್ನು ಅಣ್ಣ ಲಿಂಗರಾಜು ಎಂಬಾತ ಕೊಲೆ ಮಾಡಿ ಪರಾರಿಯಾಗಿದ್ಧಾನೆ.

ಕೆರಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಧಾವಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ಧಾರೆ. ತಮ್ಮನ ಕೊಲೆಯ ನಂತರ ಅಣ್ಣ ಲಿಂಗರಾಜು ಪರಾರಿಯಾಗಿದ್ದು, ಪೊಲೀಸರು ಆತನ ಬಂಧನಕ್ಕೆ ಬಲೆ ಬೀಸಿದ್ಧಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ