Thursday, November 19, 2026

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ | ಅಭಿವೃದ್ಧಿಗೆ ಪಕ್ಷಾತೀತವಾಗಿ ಕೈಜೋಡಿಸಿ : ಹೆಚ್.ಟಿ.ಮಂಜು

ಕೃಷ್ಣರಾಜಪೇಟೆ ಪಟ್ಟಣದ ಸಮಗ್ರವಾದ ಅಭಿವೃದ್ಧಿಗಾಗಿ ಪಕ್ಷಾತೀತವಾಗಿ ನಾಗರೀಕರೆಲ್ಲರೂ ಕೈಜೋಡಿಸಿ ಸಹಕಾರ ನೀಡಿ ಶಾಸಕ ಹೆಚ್.ಟಿ.ಮಂಜು ಮನವಿ ಮಾಡಿದರು.

ಕೃಷ್ಣರಾಜಪೇಟೆ ಪಟ್ಟಣದ ಸ್ವರ್ಣ ಜಯಂತಿ ಶಹರಿ ರೋಜ್ಗಾರ್ ಯೋಜನಾ ಭವನದಲ್ಲಿ ಪುರಸಭೆ ಆಡಳಿತಾಧಿಕಾರಿಗಳು, ಮುಖ್ಯಾಧಿಕಾರಿ ಹಾಗೂ ಕಚೇರಿಯ ಸಿಬ್ಬಂದಿಗಳು ಮತ್ತು ಸಾರ್ವಜನಿಕರೊಂದಿಗೆ ಕುಂದು ಕೊರತೆ ನಿವಾರಣಾ ಸಮಾಲೋಚನ ಸಭೆ ನಡೆಸಿ ಮಾತನಾಡಿದರು.

ಕೃಷ್ಣರಾಜಪೇಟೆ ಪಟ್ಟಣದ 23 ವಾರ್ಡುಗಳಲ್ಲಿಯೂ ಜಲಜೀವನ್ ಮಿಷನ್ ಕಾರ್ಯಕ್ರಮದ ಮನೆ ಮನೆಗೆ ಗಂಗೆ ಯೋಜನೆ ಅಡಿಯಲ್ಲಿ ಹೊಸದಾಗಿ ಪೈಪ್ ಲೈನ್ ಕಾಮಗಾರಿ ನಡೆಸಿರುವುದರಿಂದ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿ ಕೆಲವು ಬಡಾವಣೆಗಳಲ್ಲಿ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿರುವುದು ಕಂಡುಬಂದಿದೆ. ಪಟ್ಟಣದ ಜನತೆಗೆ ಶುದ್ಧವಾದ ಕುಡಿಯುವ ನೀರನ್ನು ಸರಬರಾಜು ಮಾಡುವುದು ಪುರಸಭೆಯ ಜವಾಬ್ದಾರಿ ಆಗಿರುವುದರಿಂದ ಮುಖ್ಯಾಧಿಕಾರಿಗಳು ಈ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿ ಪ್ರತಿದಿನವೂ ಜನರಿಗೆ ಶುದ್ಧವಾದ ಕುಡಿಯುವ ನೀರನ್ನು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಮಂಜು ಅವರು ಮುಖ್ಯಾಧಿಕಾರಿ ಅಶೋಕ್ ಅವರಿಗೆ ನಿರ್ದೇಶನ ನೀಡಿದರು.

ಕುಡಿಯುವ ನೀರಿನ ಪೈಪ್ಲೈನ್ ಕಾಮಗಾರಿಯನ್ನು ಪಟ್ಟಣದ 23 ವಾರ್ಡುಗಳ ಲ್ಲಿಯೂ ನಡೆಸಿರುವುದರಿಂದ ಶ್ರೀಸಾಮಾನ್ಯರು ಓಡಾಡುವ ರಸ್ತೆಗಳು ಗುಂಡಿ ಬಿದ್ದು ಹಾಳಾಗಿವೆ . ಹಾಳಾಗಿರುವ ರಸ್ತೆಗಳನ್ನು ಸರಿಪಡಿಸಲು ಕುಡಿಯುವ ನೀರು ಸರಬರಾಜು ವಿಭಾಗದ ಅಧಿಕಾರಿಗಳು ತಕ್ಷಣ ಕ್ರಮ ವಹಿಸಬೇಕು ಗುಂಡಿ ಬಿದ್ದಿರುವ ರಸ್ತೆಗಳನ್ನು ಸರಿಪಡಿಸಿ ಜನಸಾಮಾನ್ಯರು ಹಾಗೂ ವಾಹನಗಳು ಚೆನ್ನಾಗಿ ಓಡಲು ಅವಕಾಶ ಮಾಡಿಕೊಡಬೇಕು ಎಂದು ತಾಕೀತು ಮಾಡಿದ ಶಾಸಕರು ಕೃಷ್ಣರಾಜಪೇಟೆ ಪಟ್ಟಣದ ಜನರಿಗೆ ಕಳೆದ 20 ವರ್ಷಗಳಿಂದ ನಿವೇಶನವನ್ನೇ ವಿತರಿಸಿಲ್ಲ ಪುರಸಭೆ ವ್ಯಾಪ್ತಿಯ ಹೊಸ ಹೊಳಲು ತಮ್ಮಣ್ಣ ಗೌಡ ನಗರ ಹಾಗೂ ಸಾಧುಗೋನ ಹಳ್ಳಿಯ ಬಳಿ ಪುರಸಭೆ ಸ್ವಾಧೀನ ಪಡಿಸಿಕೊಂಡಿರುವ ಭೂಮಿಯಲ್ಲಿ ನಿವೇಶನಗಳನ್ನು ವಿಂಗಡಿಸಿ ಅರ್ಹ ಫಲಾನುಭವಿಗಳಿಗೆ ನಿವೇಶನ ವಿತರಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಆಯಾ ವಾರ್ಡುಗಳಲ್ಲಿ ಜನ ಸಂಪರ್ಕ ಸಭೆ ನಡೆಸಿ ನಿವೇಶನ ರಹಿತರ ಪಟ್ಟಿಯನ್ನು ಸಿದ್ಧಪಡಿಸಲು ಮುಂದಾಗಬೇಕು ಪಟ್ಟಣದಲ್ಲಿ ನಡೆಯುತ್ತಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರುವಂತೆ ಅಧಿಕಾರಿಗಳು ಮೇಲುಸ್ತುವಾರಿ ನಡೆಸಿ ಕಳಪೆ ಕಾಮಗಾರಿ ನಡೆಯುವುದು ಕಂಡು ಬಂದರೆ ಅಂತಹ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲು ನಿರ್ದಾಕ್ಷಣೀಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ತಹಸೀಲ್ದಾರ್ ಡಾ.ಯು.ಎಸ್. ಅಶೋಕ್, ಮಂಡ್ಯ ಜಿಲ್ಲಾ ನಗರ ನೀರು ಸರಬರಾಜು, ಒಳಚರಂಡಿ ಮಂಡಳಿಯ ಕಾರ್ಯಪಾಲಕ ಇಂಜಿನಿಯರ್ ನದಾಫ್, ಪುರಸಭೆಯ ಸಹಾಯಕ ಅಭಿಯಂತರಗೋಳಾದ ಬಸವೇಗೌಡ, ಚೌಡಪ್ಪ, ಪ್ರಿಯಾಂಕಾ, ಹಿರಿಯ ಆರೋಗ್ಯ ಪರಿವೀಕ್ಷಕರಾದ ಅಶೋಕ್, ಕಚೇರಿಯ ವ್ಯವಸ್ಥಾಪಕಿ ಕಾಂಚನ, ಜಯ ಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ಸೋಮಶೇಖರ್, ಪುರಸಭೆಯ ಮಾಜಿ ಸದಸ್ಯರಾದ ಡಿ.ಪ್ರೇಮ್ ಕುಮಾರ್, ಟೈಲರ್ ದಿನೇಶ್, ಕೋಳಿ ನಾಗರಾಜು, ಬಿ.ಜಿ. ದಿನೇಶ್, ಕೃಷ್ಣರಾಜಪೇಟೆ ಪಟ್ಟಣ ನಾಗರೀಕರ ಹಿತರಕ್ಷಣ ವೇದಿಕೆ ಕಾರ್ಯದರ್ಶಿ ಚಾಶಿ ಜಯಕುಮಾರ್ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಹಾಗೂ ಪಟ್ಟಣದ ಪ್ರಮುಖರು ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಪಟ್ಟಣದ ಅಭಿವೃದ್ಧಿಗೆ ಹಾಗೂ ಸಮಸ್ಯೆಗಳ ನಿವಾರಣೆಗೆ ಪೂರಕವಾದ ಸಲಹೆ ಸೂಚನೆಗಳನ್ನು ನೀಡಿದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ