ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿ ಸಿಲುಕಿ ನರಳಾಡುತ್ತಿದ್ದ ಗಾಯಾಳುಗಳಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಶಾಸಕ ಪಿ.ಎಂ. ನರೇಂದ್ರ ಸ್ವಾಮಿ ಮಾನವೀಯತೆ ಮೆರೆದಿದ್ದಾರೆ.
ಮಳವಳ್ಳಿ ತಾಲ್ಲೂಕಿನ ಗಗನಚುಕ್ಕಿ ಟೋಲ್ ಸಮೀಪ ನಡೆದಿರುವ ಮಳವಳ್ಳಿ-ಕೊಳ್ಳೇಗಾಲ ರಸ್ತೆಯ ಟೋಲ್ ಹತ್ತಿರ ವೇಗವಾಗಿ ಸಾಗುತ್ತಿದ್ದ ಎರಡು ಇನ್ನೋವಾ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರುಗಳು ನಜ್ಜುಗುಜ್ಜಾಗಿದ್ದವು, ಜಖಂಗೊಂಡ ಕಾರಿನಲ್ಲಿ ಸಿಲುಕಿ ಪ್ರಯಾಣಿಕರು ನರಳಾಡುತ್ತಿದ್ದರು.
ಅದೇ ಮಾರ್ಗದಲ್ಲಿ ಕಾರಿನಲ್ಲಿ ಸಾಗುತ್ತಿದ್ದ ಶಾಸಕ ನರೇಂದ್ರಸ್ವಾಮಿ ಅವರು ಸ್ಥಳೀಯರ ನೆರವಿನಿಂದ
ಗಾಯಾಳುಗಳನ್ನ ಪ್ರಾಥಮಿಕ ಚಿಕಿತ್ಸೆಗಾಗಿ ಅಂಬುಲೆನ್ಸ್ ಮೂಲಕ ಮಳವಳ್ಳಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲು ನೆರವಾದರು.




