Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಅಗ್ರಿ ಕ್ಲಬ್ ಮೇಲೆ ದಾಳಿ : 10 ಲಕ್ಷ ರೂ. ನಗದು ವಶ ; 29 ಜನರ ಬಂಧನ

ಜೂಜಾಟದಲ್ಲಿ ತೊಡಗಿರುವ ಖಚಿತ ಮಾಹಿತಿಯ ಮೇಲೆ ಮಂಡ್ಯನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು 10 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡು, 29 ಜನರನ್ನು ವಶಕ್ಕೆ ಪಡೆದಿದ್ದಾರೆ.

ಮಂಡ್ಯ ಎಸ್ಪಿ ಶೋಭಾರಾಣಿ ಅವರ ನೇತೃತ್ವದಲ್ಲಿ ಸೋಮವಾರ ತಡರಾತ್ರಿ ದಾಳಿ ನಡೆಸಿದ ನಡೆಸಿದ ಪೊಲೀಸರು ಜೂಜಿನಲ್ಲಿ ತೊಡಗಿದ್ದ 29 ಜನರನ್ನು ವಶಕ್ಕೆ ಪಡೆದು, 10 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದಿದ್ದಾರೆ.

ಸಾಮಾನ್ಯವಾಗಿ ಕ್ಲಬ್ ಗಳಲ್ಲಿ ರಾತ್ರಿ 11 ಗಂಟೆಯವರೆಗೆ ಜಾಕ್ ಪಾಟ್ ಹಾಗೂ ರಮ್ಮಿ ಆಡಲು ಅವಕಾಶ ನೀಡಲಾಗುತ್ತದೆ. ಆದರೆ ಅಗ್ರಿ ಕ್ಲಬ್ ನಲ್ಲಿ ಅದನ್ನೂ ಹೊರತುಪಡಿಸಿ ಇತರೆ ಜೂಜಿನಲ್ಲಿ ತಡರಾತ್ರಿಯವರೆಗೆ ಹಲವರು ತೊಡಗಿದ್ದರು ಎನ್ನಲಾಗಿದೆ. ಅಗ್ರಿ ಕ್ಲಬ್ ನ ಸದಸ್ಯರಲ್ಲದೇ ರಾಮನಗರ, ಚನ್ನಪಟ್ಟಣ ಭಾಗದಲ್ಲಿ ಹಲವರು ಗೆಸ್ಟ್ ಹೆಸರಿನಲ್ಲಿ ಬಂದು ಇಲ್ಲಿ ಜೂಜಿನಲ್ಲಿ ತೊಡಗಿದ್ದರು ಎನ್ನಲಾಗಿದ್ದು, ಇದರ ಮಾಹಿತಿ ಪಡೆದ ಪೊಲೀಸರು, ಮಧ್ಯರಾತ್ರಿ ದಾಳಿ ನಡೆಸಿದರು. ಈ ಸಂದರ್ಭದಲ್ಲಿ ಕೆಲವರು ಕೌಂಪಾಂಡ್ ನೆಗೆದು ಪರಾರಿಯಾದರು ಎಂದು ತಿಳಿದು ಬಂದಿದೆ.

ದಾಳಿ ಸಂದರ್ಭದಲ್ಲಿ 10 ಲಕ್ಷಕ್ಕಿಂತಲೂ ಹೆಚ್ಚು ಹಣ ಸಿಕ್ಕಿರುವುದರಿಂದ ಇಲ್ಲಿ ರಮ್ಮಿ, ಜಾಕ್ ಪಾಟ್ ಅಷ್ಟೇ ಅಲ್ಲದೇ ಜೂಜು ನಡೆಯುತ್ತಿರುವ ಅನುಮಾನಗಳು ವ್ಯಕ್ತವಾಗಿದೆ. ಪದೇ ಪದೇ ಅಗ್ರಿ ಕ್ಲಬ್ ಮೇಲೆ ಇಂತಹ ದಾಳಿ ನಡೆಯುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಪೊಲೀಸರು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮಂಡ್ಯ ಗ್ರಾಮಾಂತರ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ