Tuesday, November 24, 2026

ಪ್ರಾಯೋಗಿಕ ಆವೃತ್ತಿ

ನಿಖಿಲ್ ಕುಮಾರಸ್ವಾಮಿ ಕುರಿತು ನಾರಾಯಣಗೌಡ ಹೇಳಿಕೆ ಸರಿಯಲ್ಲ : ಹೆಚ್.ಟಿ.ಮಂಜು

ದೇಶದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಶಾಶ್ವತವಾಗಿ ಮುಂದುವರೆಯಲಿದೆ. ಇದಕ್ಕೆ ಧಕ್ಕಯಾಗುವಂತೆ ಯಾರಾದರೂ ಪ್ರಚೋಧಿಸಿದರೆ ಪ್ರತಿಕ್ರಿಯೆ ನೀಡದಂತೆ ಪಕ್ಷದ ವರಿಷ್ಠರು ಸೂಚನೆ ನೀಡಿದ್ದಾರೆ. ಆದರೆ ಇತ್ತೀಚೆಗೆ ಪಕ್ಷದ ನಾಯಕ ನಿಖಿಲ್ ಕುಮಾರಸ್ವಾಮಿ ಅವರ ವಿರುದ್ಧ ಕೆ.ಸಿ.ನಾರಾಯಣಗೌಡ ಅವರ ಹೇಳಿಕೆ ಸರಿಯಾದುದಲ್ಲ ಎಂದು ಕೆ.ಆರ್.ಪೇಟೆ ಶಾಸಕ ಹೆಚ್.ಟಿ.ಮಂಜು ಹೇಳಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಮೈತ್ರಿಯು ಸದೃಢವಾಗಿದ್ದು, ಮಾಜಿ ಸಚಿವ ಕೆ.ಸಿ.ನಾರಾಯಣಗೌಡ ಗೌಡ ಅವರು ಎನ್‌ಡಿಎ ಮೈತ್ರಿಕೂಟದ ಸಂಘರ್ಷಕ್ಕೀಡಾಗುವ ಹೇಳಿಕೆ ನೀಡಬಾರದು ಎಂದರು.

ಅವರು ಮೈತ್ರಿ ಪಕ್ಷದ ಮುಖಂಡರು, ೨೦೧೩ರಲ್ಲಿ ಜೆಡಿಎಸ್‌ನಿಂದ ಮೊದಲ ಬಾರಿಗೆ ಸ್ಪರ್ಧಿಸಿ ಶಾಸಕರಾದರು, ೨೦೧೮ರಲ್ಲಿ ನಿಖಿಲ್ ಅವರು ರಾಜಕೀಯ ಪ್ರವೇಶ ಮಾಡದಿದ್ದರೂ ಕೆ.ಸಿ.ನಾರಾಯಣಗೌಡ ಅವರನ್ನು ಪಕ್ಷದ ಅಭ್ಯರ್ಥಿ ಎಂದು ಘೋಷಿಸಿದ್ದರು ಎಂಬುದನ್ನು ಮರೆಯಬಾರದು. ಹೆಚ್.ಡಿ.ದೇವೇಗೌಡರ ಕುಟುಂಬದ ನೆರವಿಲ್ಲದೇ ರಾಜಕೀಯವಾಗಿ ಬೆಳೆಯಲು ಸಾಧ್ಯವಿರಲಿಲ್ಲ.ಅವರು ನಡೆದುಬಂದ ಹಾದಿಯನ್ನು ಮರೆಯಬಾರದು. ಅವರು ಅನುಭವಿ ಹಿರಿಯ ರಾಜಕಾರಣಿಗಳು, ಪದೇ ಪದೇ ಈ ರೀತಿಯ ಹೇಳಿಕೆ ನೀಡಬಾರದು ಎಂದರು.

ಕಳೆದ ಜನವರಿ ೧೬ರಂದು ಗವಿಗಂಗಾಧರಸ್ವಾಮಿ ದೇವಾಲಯದ ಬಳಿ ಕಲ್ಯಾಣಿ ಉದ್ಘಾಟನೆ ವೇಳೆ ತಾವು ತಂದ ಅನುದಾನದಿಂದ ಕಾಮಗಾರಿ ನಡೆದಿದೆ ಎಂದಿದ್ದರು. ಅದಕ್ಕೆ ಸಹಮತ ವ್ಯಕ್ತಪಡಿಸಿ ಕಾಂಗ್ರೆಸ್ ಸರಕಾರದಿಂದ ಅವರ ಅವಧಿಯ ೩೭ ಕೋಟಿ ರೂ.ಗಳ ಅನುದಾನ ಹಿಂಪಡೆಯಲಾಗಿದೆ ಎಂಬುದನ್ನು ಸೂಕ್ಷ್ಮವಾಗಿ ಹೇಳಿದ್ದೆ. ಹಿಂದಿನ ಶಾಸಕರು ತಂದ ಅನುದಾನದ ಕಾಮಗಾರಿಗಳಿಗೆ ಹಾಲಿ ಶಾಸಕರು ಚಾಲನೆ ನೀಡುವುದು ವಾಡಿಕೆ ಅದನ್ನು ತಪ್ಪೆಂಬದಂತೆ ಬಿಂಬಿಸಬಾರದೆಂದು ಹೇಳಿದರು.

ಇತ್ತೀಚೆಗೆ ಕಾಂಗ್ರೆಸ್ ಪಕ್ಷದ ಮನು ಅವರೊಂದಿಗೆ ೧೫ರಿಂದ ೩೦ ಮಂದಿ ಜೆಡಿಎಸ್ ಸೇರ್ಪಡೆಗೊಂಡರು. ಬಿಜೆಪಿ ಪಕ್ಷದ ಮುಖಂಡರು ನನ್ನ ಮನೆಗೆ ಆಗಮಿಸಿದಾಗ ಸಾಧಾರಣ ಶಾಲು ಹಾಕಿ ಸ್ವಾಗತಿಸಿದೆ. ಇದನ್ನು ಮನೆಗೆ ಬಂದವರನ್ನೆಲ್ಲ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದಾರೆ ಎಂಬ ತಪ್ಪು ಸಂದೇಶ ರವಾನಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಗೋಷ್ಠಿಯಲ್ಲಿ ಕೆ.ಆರ್.ಪೇಟೆ ಟಿಎಪಿಸಿಎಂಎಸ್ ಅಧ್ಯಕ್ಷ ಬಲದೇವ್, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್ ಜಿ.ಪಂ ಮಾಜಿ ಸದಸ್ಯ ಮೋಹನ್, ಜೆಡಿಎಸ್ ತಾಲೂಕು ಯುವ ಘಟಕದ ಅಧ್ಯಕ್ಷ ರವಿ, ಮಾದೇವು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ