Tuesday, November 24, 2026

ಪ್ರಾಯೋಗಿಕ ಆವೃತ್ತಿ

ಎಪ್ಸ್ಟೀನ್ ಫೈಲ್ಸ್ ನಲ್ಲಿ ಪ್ರಧಾನಿ ಮೋದಿ ಹೆಸರು : ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ

ಹದಿಹರಿಯದ ಹೆಣ್ಣುಮಕ್ಕಳನ್ನು ಲೈಂಗಿಕವಾಗಿ ಹಿಂಸಿರುವ ಆರೋಪ ಹೊತ್ತಿರುವ ಎಪ್ಸ್ಟೀನ್ ಫೈಲ್ಸ್ ವಿಚಾರದಲ್ಲಿ ಭಾರತದ ಪ್ರಧಾನಿ ಮೋದಿ ಹೆಸರು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಮಂಡ್ಯನಗರದಲ್ಲಿ ಕಾಂಗ್ರೆಸ್ ಕಾರ್ಯರ್ತರು ಸೋಮವಾರ ಪ್ರತಿಭಟನೆ ನಡೆಸಿದರು.

ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮೋದಿ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಎಪ್ಸ್ಟೀನ್ ಫೈಲ್ಸ್ ನಲ್ಲಿ ಭಾಗಿಯಾಗಿರುವ ಆರೋಪದ ಹಿನ್ನೆಲೆಯಲ್ಲಿ ಭಾರತದ ಹಿತಾಸಕ್ತಿಯನ್ನು ಕಡೆಗಣಿಸಿ ಅಮೆರಿಕಾದೊಂದಿಗೆ ವಾಣಿಜ್ಯ ಒಪ್ಪಂದದಲ್ಲಿ ರಾಜೀ ಮಾಡಿಕೊಂಡಿದ್ದಾರೆ. ಇದರಿಂದಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ಘನತೆಗೆ ಕುಂದುಟಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್ ಮಾತನಾಡಿ, ನರೇಂದ್ರಮೋದಿಯವರು ಒಳಒಪ್ಪಂದ ಮಾಡಿಕೊಂಡು ದೇಶದ ಹಿತಾಸಕ್ತಿಯನ್ನು ಕಡೆಗಣಿಸಿದ್ದಾರೆ. ನಮ್ಮ ರಾಷ್ಟ್ರದ ಆಸ್ತಿಯನ್ನು ಖಾಸಗೀಕರಣ ಮಾಡುವ ಮೂಲಕ ಸಂಪತ್ತನ್ನು ಕೊಳ್ಳೆ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವನಾಗರಾಜು, ಮಂಡ್ಯ ತಾಲ್ಲೂಕು ಅಧ್ಯಕ್ಷ ಸುನಿಲ್, ಉಪಾಧ್ಯಕ್ಷರಾದ ನಿಂಗರಾಜು (ಪಾಪು ), ನಗರಸಭೆ ಸದಸ್ಯ ಶ್ರೀಧರ್, ಯುವ ಕಾಂಗ್ರೆಸ್ ಪದಾಧಿಕಾರಿಗಳಾದ ಹರೀಶ್,ಸುಮ, ಅಪ್ಪು ಆರ್.ಗೌಡ, ಮಂಜುನಾಥ್, ಮಣಿ ಸೇರಿದಂತೆ ಇತರರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ