Sunday, November 22, 2026

ಪ್ರಾಯೋಗಿಕ ಆವೃತ್ತಿ

ಶರಣರ ಆದರ್ಶ ಮೌಲ್ಯವನ್ನು ಯುವಜನರು ಅಳವಡಿಸಿಕೊಳ್ಳಬೇಕು ; ಡಾ.ನಂದೀಶ್

ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ, ಯುವಜನತೆಯೂ ಕಾಯಕ ಶರಣರ ಆದರ್ಶ,ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಬಿ.ವಿ ನಂದೀಶ್ ಹೇಳಿದರು.

ಮಂಡ್ಯ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಂಡ್ಯ ಇವರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಚೇರಿಯ ಸಭಾಂಗಣದಲ್ಲಿ ನಡೆದ ಕಾಯಕ ಶರಣರ ಜಯಂತಿ (ಮಾದರ ಚೆನ್ನಯ್ಯ ಮಾದರ ಧೂಳಯ್ಯ ಡೋಹರ ಕಕ್ಕಯ್ಯ ಸಮಗಾರ ಹರಳಯ್ಯ ಉರಿಲಿಂಗ ಪೆದ್ದಿ) ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

12 ನೇ ಶತಮಾನದಲ್ಲಿ ಸಾಮಾಜಿಕ ಸುಧಾರಣೆಗಳನ್ನು ಮಾಡಿದ್ದಾರೆ. ಶರಣರು ಅನ್ನ ದಾಸೋಹ ಮತ್ತು ಕಾಯಕ ದಾಸೋಹವನ್ನು ಆರಾಧಿಸುತ್ತಿದ್ದರು. ಯುವಸಮುದಾಯವು ಶರಣರ ಆದರ್ಶಗಳನ್ನುಬೆಳಸಿಕೊಳ್ಳಬೇಕು ಮತ್ತು ಸಮುದಾಯಕ್ಕೆ ಮಾದರಿಯಾಗುವಂತಹ ಕಾರ್ಯಗಳನ್ನು ಮಾಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೆಂಗಳೂರಿನ ಪರಿಶಿಷ್ಟ ಜಾತಿ ಹಾಗೂ ಪಂಗಡ ಆಯೋಗದ ಮಾಜಿ ಸದಸ್ಯರಾದ ವೆಂಕಟೇಶ್ ದೊಡ್ಡೇರಿ, ಮಾದರ ಮಹಾಸಭಾ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎನ್ .ಆರ್ ಚಂದ್ರಶೇಖರ್, ಸಿ.ಕೆ ಪಾಪಯ್ಯ, ವಕೀಲ ಕನ್ನಲಿ ಕೆಂಪಣ್ಣ, ಕೃಷ್ಣ, ಮುಖಂಡರಾದ ಎಲ್ .ಸಂದೇಶ್, ಬಿ.ಎಸ್ ಅನುಪಮ ಹಾಗೂ ಇನ್ನಿತರರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ