Tuesday, November 24, 2026

ಪ್ರಾಯೋಗಿಕ ಆವೃತ್ತಿ

ಕ್ರೀಡೆಗೆ ಪೋಷಕರು ಸಹಕಾರ ನೀಡಬೇಕು

ಮಕ್ಕಳು ಯಾವ ಕ್ರೀಡೆಯಲ್ಲಿ ಆಸಕ್ತಿ ವಹಿಸುತ್ತಾರೋ ಪೋಷಕರು ಕೂಡ ಅವರಿಗೆ ಸಹಕಾರ ನೀಡಬೇಕೆಂದು ಉಪ ಕುಲಪತಿ ಡಾ.ಎಂ.ಎ.ಶೇಖರ್ ತಿಳಿಸಿದರು.

ಮಂಡ್ಯ ನಗರದ ಪಿಇಟಿ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮಣ್ಣ ಮೆಮೋರಿಯಲ್‌, ಭಾರತೀಯ ವೈದ್ಯಕೀಯ ಸಂಘದ ವತಿಯಿಂದ ಹಮ್ಮಿಕೊಂಡಿದ್ದ 25ನೇ ವರ್ಷದ ಡಾ.ಸೋಮಣ್ಣ ಮೆಮೊರಿಯಲ್‌ ರಾಜ್ಯಮಟ್ಟದ ಷಟಲ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುತ್ತಿರುವುದು ಶ್ಲಾಘನೀಯವಾಗಿದ್ದು, ಇದಕ್ಕೆ ಕುಟಂಬದವರ ಪಾತ್ರ ಮುಖ್ಯವಾಗುತ್ತದೆ. ಕ್ರೀಡೆಯಲ್ಲಿ ಮಕ್ಕಳು ಬೆಳೆಯಲು ಪೋಷಕರು ಕೊಡುವ ಸಹಕಾರ ಸಮಾಜದಲ್ಲಿ ಮುಖ್ಯವಾಗುತ್ತದೆ. ಇದು ಕೊನೆಯವರೆಗೂ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಾಗಬೇಕು. ವಿದ್ಯಾರ್ಥಿ ದಿಸೆಯಲ್ಲಿಯೇ ಸಮಯ ಹಾಳು ಮಾಡಿಕೊಳ್ಳದೇ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜನತಾ ಶಿಕ್ಷಣ ಟ್ರಸ್ಟ್‌ ಅಧ್ಯಕ್ಷ ಕೆ.ಎಸ್‌.ವಿಜಯ್‌ ಆನಂದ್ ಮಾತನಾಡಿ, ಪಿಇಟಿ ಸಂಸ್ಥೆ ವತಿಯಿಂದ ಹಲವು ಕಾರ್ಯಕ್ರಮಗಳನ್ನು ಮಕ್ಕಳಿಗೆ ಆಯೋಜಿಸಲಾಗುತ್ತಿದೆ. ನಮ್ಮ ಆರೋಗ್ಯ ನೋಡಿಕೊಳ್ಳುವ ವೈದ್ಯರು ಕ್ರೀಡಾಪಟುಗಳಾಗಿ ಭಾಗವಹಿಸುತ್ತಿರುವುದು ಮೆಚ್ಚುವ ಕೆಲಸವಾಗಿದೆ ಎಂದು ಶ್ಲಾಘಿಸಿದರು.
ಭಾರತೀಯ ವೈದ್ಯಕೀಯ ಸಂಘದ ಮಾಜಿ ಅಧ್ಯಕ್ಷ ಜಿ.ಕೆ.ರಾಮಚಂದ್ರಪ್ಪ ಮಾತನಾಡಿ, ಭಾರತಕ್ಕೆ ಸ್ವಾತಂತ್ರ್ಯ ಬಂದು 75ವರ್ಷ ಕಳೆದಿವೆ.

ಅದೇ ರೀತಿ ಸೋಮಣ್ಣ ಮೆಮೋರಿಯಲ್‌ 25 ವರ್ಷ ಪೂರೈಸಿ ಬೆಳ್ಳಿ ಮಹೋತ್ಸವ ಆಚರಿಸಿ ಕೊಳ್ಳುತ್ತಿರುವುದು ಹೆಮ್ಮೆ ತಂದಿದೆ. ಈ 25 ವರ್ಷದ ಹಾದಿಯಲ್ಲಿ ಸಂಸ್ಥೆಯಲ್ಲಿ ತರಬೇತು ಪಡೆದವರು ರಾಜ್ಯ ಮತ್ತು ಅಂತರರಾಜ್ಯ ಮಟ್ಟದಲ್ಲಿ ಭಾಗವಹಿಸಿ ಹೆಸರು ತಂದುಕೊಟ್ಟಿದ್ದಾರೆ ಎಂದು ಪ್ರಶಂಸಿದರು.

ಕಾರ್ಯಕ್ರಮದಲ್ಲಿ ಮಿಮ್ಸ್‌ ನಿರ್ದೇಶಕ ಡಾ.ಎಂ.ಆರ್.ಹರೀಶ್‌, ಡಾ.ಟಿ.ಎನ್‌.ಮರೀಗೌಡ, ಡಾ.ಲಕ್ಷ್ಮೀಶ್‌, ಡಾ.ಮಲ್ಕಿಪಾಟೀಲ್‌, ತ್ಯಾಗರಾಜು ಭಾಗವಹಿಸಿದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ