Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಶಿವರಾತ್ರಿ ಮಹೋತ್ಸವಕ್ಕೆ ನಿರ್ಮಲಾನಂದನಾಥಶ್ರೀ ಚಾಲನೆ

ಮಂಡ್ಯ ನಗರದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ವತಿಯಿಂದ ಶಿವರಾತ್ರಿ ಹಬ್ಬದ ಪ್ರಯುಕ್ತವಾಗಿ ಶಿವರಾತ್ರಿ ಮಹೋತ್ಸವ ಮತ್ತು ಯುವ ಜನೋತ್ಸವ ಕಾರ್ಯಕ್ರಮವನ್ನು ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ಶ್ರೀನಿರ್ಮಲಾನಂದನಾಥಸ್ವಾಮಿ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ಆದಿಚುಂಚನಗಿರಿ ಮಠ ಮತ್ತು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ನಡುವೆ ಶ್ರೀಬಾಲಗಂಗಾಧರನಾಥ ಮಹಾಸ್ವಾಮಿಜಿಗಳ ಕಾಲದಿಂದಲೂ ಕೂಡ ಅವಿನಾಭಾವ ಸಂಬಂಧ ಇದೆ. ಈ ಸಂಬಂಧದ ಫಲವಾಗಿ ನಾವು ಕೂಡ ಈ ಕಾರ್ಯಕ್ರಮದಲ್ಲಿ ಬಂದಿದ್ದೇವೆ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ದೇಶದಲ್ಲೇ ಅಲ್ಲ, ವಿಶ್ವದಾದ್ಯಂತ ಶಾಂತಿಗಾಗಿ ಆಧ್ಯಾತ್ಮಿಕ  ಶಿಕ್ಷಣ ಪರಮಾತ್ಮನ ಪರಿಚಯವನ್ನು ಸಮಾಜದಲ್ಲಿ ನೀಡುತ್ತಾ ಉತ್ತಮ ಸೇವೆಯನ್ನು ಮಾಡುತ್ತ ಬಂದಿದೆ ಎಂದು ಹೇಳಿದರು.

ಶಾಸಕ ರವಿಕುಮಾರ್ ಅವರು ಮಾತನಾಡಿ ಬ್ರಹ್ಮಕುಮಾರಿಸ್ ನ ಪ್ರತಿ ಕಾರ್ಯದಲ್ಲೂ ನಮ್ಮ ಸಹಕಾರ ಇದೆ, ಮುಂದಿನ ದಿನಗಳಲ್ಲಿ ಇಂಥ ಕಾರ್ಯಕ್ರಮಗಳು ಇದೆ ರೀತಿ ಉತ್ತಮವಾಗಿ ನಡೆಯಬೇಕು ಎಂದು ತಿಳಿಸಿದರು.

ಈ ಸಮಾರಂಭದಲ್ಲಿ ಡಾ.ಮೀರಾ ಶಿವಲಿಂಗಯ್ಯ  ಬ್ರಹ್ಮಕುಮಾರಿಸ್ ಸಂಸ್ಥೆ ಬಿ.ಕೆ.ಶಾರದ , ಬಿಕೆ ರಾಧಾ, ಬಿಕೆ ಸರೋಜ, ಬಿಕೆ ಸುನಂದಾ, ವಿಜಯ ಲಕ್ಷ್ಮಿ ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ