Monday, November 23, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ : ಅನ್ನ ದಾಸೋಹ ಭವನಕ್ಕೆ ದೇಣಿಗೆ ನೀಡಿದ ಬಿ. ಆರ್. ರಾಮಚಂದ್ರು 

ಮಂಡ್ಯ ತಾಲ್ಲೂಕು ಹಳೇಬೂದನೂರು ಗ್ರಾಮದ ಶ್ರೀ ಸೋಮೇಶ್ವರ ಸ್ವಾಮಿ ಮತ್ತು ಶ್ರೀ ಅಂಕನಾಥೇಶ್ವರ ಸ್ವಾಮಿ ದೇವಾಲಯ ಆವರಣದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಅನ್ನ ದಾಸೋಹಭವನಕ್ಕೆ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆ.ಡಿ.ಎಸ್ ಮುಖಂಡ ಹಾಗೂ ಮನ್ಮುಲ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕರಾದ ಬಿ.ಆರ್. ರಾಮಚಂದ್ರ ಅವರು 1,50,000 ರೂ. ಗಳನ್ನು (ಒಂದು ಲಕ್ಷದ ಐವತ್ತು ಸಾವಿರ ರೂ.) ದೇಣಿಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಶ್ರೀ ಅಂಕನಾಥೇಶ್ವರಸ್ವಾಮಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಬಿ.ಟಿ ಅಂಕಯ್ಯ,,ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಬೂದನೂರು ಸ್ವಾಮಿ,,ಗ್ರಾಮ ಪಂಚಾಯತ್ ಸದಸ್ಯ ಮಧು,ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ದಿನೇಶ್ ,ಮುಖಂಡರಾದ ಶಂಕರ್ ಹಾಗೂ ಮುಖಂಡರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ