Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಫೆ.21ಕ್ಕೆ ಸಾಯಿ ಸಂಗೀತೋತ್ಸವ ಕಾರ್‍ಯಕ್ರಮ

ಪ್ರಶಾಂತಿ ಸೇವಾ ಟ್ರಸ್ಟ್ ಮತ್ತು ಮಧುರ ಮಂಡ್ಯ ರಂಗಕಲಾ ಟ್ರಸ್ಟ್ ಸಹಯೋಗದೊಂದಿಗೆ ಸಾಯಿ ಸಂಗೀತೋತ್ಸವ ಕಾರ್‍ಯಕ್ರಮವನ್ನು ಫೆ.೨೧ರಂದು ಸಂಜೆ ೪.೩೦ಕ್ಕೆ ನಗರದ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಡಾ.ಎ.ವಿ.ಉಮೇಶ್ ತಿಳಿಸಿದರು.

ಮಂಡ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯ ಮತ್ತು ಶ್ರೀಸತ್ಯ ಸಾಯಿ ಲೋಕ ಸೇವಾ ಗುರುಕುಲಂನ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಂದ ಸಂಗೀತ ಮತ್ತು ಸ್ವರಮೇಳ ನಡೆಯಲಿದೆ ಎಂದರು.

ಕಾರ್‍ಯಕ್ರಮವನ್ನು ರಾಜೀವ್ ಗಾಂಧಿ ವೈದ್ಯಕೀಯ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಬಿ.ಸಿ.ಭಗವಾನ್ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಮಧುರ ಮಂಡ್ಯ ರಂಗಕಲಾ ಟ್ರಸ್ಟ್‌ನ ಅಧ್ಯಕ್ಷ ಡಾ.ಎ.ವಿ.ಉಮೇಶ್ ವಹಿಸುವರು. ಮಂಡ್ಯ ವೈದ್ಯಕೀಯ ವಿಜ್ಞಾನಗಳ ನಿರ್ದೇಶಕ ಡಾ.ನರಸಿಂಹಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಸತ್ಯಸಾಯಿ ಲೋಕ ಸೇವಾ ಗುರುಕುಲಂನ ಹಿರಿಯ ವಿದ್ಯಾರ್ಥಿ, ತಾರಾ ಡಯಗ್ನೋಸ್ಟಿಕ್ ಸೆಂಟರ್‌ನ ರೋಗಶಾಸ್ತ್ರ ತಜ್ಞ ಡಾ.ಕೆ.ಚಂದ್ರಶೇಖರ್ ಪ್ರಾಸ್ತವಿಕ ನುಡಿಗಳನ್ನಾಡುವರು. ಗುರುಕುಲಂನ ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವರು ಎಂದು ವಿವರಿಸಿದರು.

ಗೋಷ್ಠಿಯಲ್ಲಿ ಮಧುರ ಮಂಡ್ಯ ಕಲಾಟ್ರಸ್ಟ್‌ನ ಕಾರ್‍ಯದರ್ಶಿ ಚಿಕ್ಕ ಸಿದ್ದಯ್ಯ, ಖಜಾಂಚಿ ರಾಮಲಿಂಗೇಗೌಡ, ವೈದ್ಯ ಡಾ.ಕೆ.ಚಂದ್ರಶೇಖರ್, ಸರಕಾರಿ ನೌಕರರ ಸಂಘದ ರಘು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ