ಜೂನ್ ಒಳಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಮಂಜಗುಣಿಯಲ್ಲಿ ಭಾನುವಾರ ಗಂಗಾವಳಿ ಮಂಜಗುಣಿ ಸೇತುವೆ ಉದ್ಘಾಟಿಸಿ ಅವರು ಮಾತನಾಡಿದರು.
‘ಗೋಕರ್ಣವನ್ನು ಪಟ್ಟಣ ಪಂಚಾಯಿತಿ ಮೇಲ್ದರ್ಜೆಗೇರಿಸಲು ಬೇಡಿಕೆ ಇದೆ. ಆದರೆ, ಚುನಾವಣೆಗಳು ಸಮೀಪಿಸಿದೆ. ಜನಗಣತಿಯೂ ನಡೆಯಲಿದೆ. ಹೀಗಾಗಿ, ಸದ್ಯ ಹೊಸದಾಗಿ ಪಟ್ಟಣ ಪಂಚಾಯಿತಿ ರಚನೆ ಸಾಧ್ಯವಾಗದು. ಚುನಾವಣೆಗಳು ಮುಗಿದ ಬಳಿಕ ಗೋಕರ್ಣ ಪಟ್ಟಣ ಪಂಚಾಯಿತಿ ರಚನೆ ಮಾಡಲಾಗುವುದು’ ಎಂದರು.
‘ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಸ್ತಾವವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ. ಪುನರ್ ಪ್ರಸ್ತಾವ ಸಲ್ಲಿಸಲು ಸರ್ಕಾರ ಸಿದ್ದವಿದೆ ಎಂದು ಹೇಳಿದರು.
ಸಮಾರಂಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಆರ್.ವಿ.ದೇಶಪಾಂಡೆ, ಮಂಕಾಳ ವೈದ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.




