Saturday, November 21, 2026

ಪ್ರಾಯೋಗಿಕ ಆವೃತ್ತಿ

ಉದ್ಯೋಗಾಕಾಂಕ್ಷಿಗಳ ಆಶೋತ್ತರ ಈಡೇರಿಸುವಲ್ಲಿ ಸರ್ಕಾರ ವಿಫಲ : ಜೆಡಿಎಸ್

ಕಾಂಗ್ರೆಸ್ ಸರ್ಕಾರದ ವಿರುದ್ಧ ತಾಳ್ಮೆಯ ಕಟ್ಟೆ ಒಡೆದು ಯುವಜನತೆ ಆಕ್ರೋಶ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ಸರ್ಕಾರ, ಮೂರು ವರ್ಷ ಕಳೆಯುತ್ತಾ ಬಂದರೂ ಒಂದೇ ಒಂದು ಖಾಲಿ ಹುದ್ದೆಯನ್ನು ಭರ್ತಿ ಮಾಡಿಲ್ಲ ಎಂದು ಜೆಡಿಎಸ್ ಕಿಡಿಕಾರಿದೆ.

ಒಂದು ವರ್ಷದಲ್ಲಿ ಯುವಕರಿಗೆ ಉದ್ಯೋಗ ಒದಗಿಸುವುದಾಗಿ ಬುರುಡೆ ಬಿಟ್ಟಿದ್ದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಕುರ್ಚಿಗಾಗಿ ಪ್ರತಿ ನಿತ್ಯ ಹೋರಾಡುತ್ತಿದ್ದಾರೆ. ಪ್ರಾಮಾಣಿಕವಾಗಿ ಪರೀಕ್ಷೆ ಎದುರಿಸಿರುವ ಅಭ್ಯರ್ಥಿಗಳಿಗೆ ಉದ್ಯೋಗ ಸಿಗದೆ, ಬದುಕು ಅತಂತ್ರವಾಗಿದೆ ಎಂದು ಜೆಡಿಎಸ್ ಎಕ್ಸ್ ನಲ್ಲಿ ತಿಳಿಸಿದೆ.

ಉದ್ಯೋಗಾಕಾಂಕ್ಷಿಗಳ ಆಶೋತ್ತರಗಳನ್ನು ಈಡೇರಿಸುವಲ್ಲಿ ವಿಫಲವಾಗಿರುವ ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಯುವಜನತೆ ಸಿಡಿದೆದ್ದಿದೆ. ಖಾಲಿ ಇರುವ 2.85 ಲಕ್ಷಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಆಗ್ರಹಿಸಿ, ಇಂದು ಧಾರವಾಡದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಯುವಜನತೆ ಬೀದಿಗಿಳಿದು ಹೋರಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ