ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದ ಪಂಚಲಿಂಗೇಶ್ವರ ದೇವಾಲಯದಲ್ಲಿ ಫೆ.27 ಹಾಗೂ 28 ರಂದು ಬೆಳಿಗ್ಗೆ 10 ಗಂಟೆಗೆ ಅಷ್ಟಮಂಗಳ ಪೂಜೆಯನ್ನು ಹಮ್ಮಿಕೊಳ್ಳಲಾಗಿದ್ದು, ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಡಬೇಕೆಂದು ಶಾಸಕ ರವಿಕುಮಾರ್ ಮನವಿ ಮಾಡಿದ್ದಾರೆ.
ದೇವಾಲಯ ನಿರ್ಮಾಣದ ಅಂಗವಾಗಿ ಈ ಪೂಜಾ ಕಾರ್ಯವನ್ನು ನಡೆಸಲಾತ್ತಿದೆ, ಆದ್ದರಿಂದ ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ, ಐತಿಹಾಸಿಕ ದೇವಾಲಯದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.




