Monday, November 23, 2026

ಪ್ರಾಯೋಗಿಕ ಆವೃತ್ತಿ

ಗರ್ಭಿಣಿಯರು ಪೌಷ್ಟಿಕಾಂಶ ಭರಿತ ಆಹಾರ ಸೇವಿಸಬೇಕು

ಗರ್ಭಿಣಿಯರು ಆರೋಗ್ಯವಾಗಿರಬೇಕೆಂದರೆ ಮುಖ್ಯವಾಗಿ ಪೌಷ್ಟಿಕಾಂಶ ಭರಿತ ಆಹಾರ ಸೇವಿಸಬೇಕು. ಇಲ್ಲದಿದ್ದರೆ ಅವಳಿಗೂ ಮತ್ತು ಆಕೆಯ ಹೊಟ್ಟೆಯಲ್ಲಿರುವ ಮಗುವಿಗೂ ತೊಂದರೆಯಾಗುತ್ತದೆಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಬೆನ್ನೂರ ಸಲಹೆ ನೀಡಿದರು.
ಶ್ರೀರಂಗಪಟ್ಟಣದ ರಂಗನಾಥ ನಗರದ ಅಂಗನವಾಡಿ ಕೇಂದ್ರದಲ್ಲಿ,” ಗರ್ಭಿಣಿ ಆರೈಕೆ”ಕುರಿತು ಏರ್ಪಡಿಸಿದ್ದ ಸಭೆ ಉದ್ದೇಶಿಸಿ ಮಾತನಾಡಿದರು.

ಗರ್ಭಿಣಿಯರು ಉತ್ತಮ ಆಹಾರ ಸೇವಿಸುವುದರಿಂದ ಆರೋಗ್ಯವಂತ ಮಗು ಪಡೆಯಬಹುದು.ಆದ್ದರಿಂದ ದಿನದ ಮಾಮೂಲಿಗಿಂತ ಹೆಚ್ಚು ಆಹಾರ ಸೇವಿಸಬೇಕು, ಹಾಲು, ಹಸಿರು ತರಕಾರಿ, ಸೊಪ್ಪು ಮತ್ತು ಹಣ್ಣುಗಳನ್ನು ಹೆಚ್ಚಾಗಿ ಉಪಯೋಗಿಸಬೇಕು ಎಂದರು.

ಆಹಾರದಲ್ಲಿ ಅಯೋಡಿನ್ ಯುಕ್ತ ಉಪ್ಪನ್ನು ಮಾತ್ರ ಬಳಸಬೇಕು.ಕರಿದ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಬಾರದು. ಗರ್ಭಾವಸ್ಥೆಯಲ್ಲಿ ಆಗಾಗ್ಗೆ ವಿಶ್ರಾಂತಿ ತೆಗೆದುಕೊಂಡು ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರು ಸೂಚಿಸುವ ಮಾತ್ರೆಗಳನ್ನು ತಪ್ಪದೆ ಸೇವಿಸಬೇಕೆಂದು ಸಲಹೆ ನೀಡಿದರು.

ಸದರಿ ವೇಳೆ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ರಬೇಕಾ, ಆಶಾ ಮೇಲ್ವಿಚಾರಕಿ ರಶ್ಮಿ,ಅಂಗನವಾಡಿ ಕಾರ್ಯಕರ್ತೆ ರೇಷ್ಮಾ, ಆಶಾ ಕಾರ್ಯಕರ್ತೆ ಮೀನಾ ಹಾಗೂ ಗರ್ಭಿಣಿಯರು, ಬಾಣಂತಿಯರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ