Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಮಾ.8 ಕ್ಕೆ ನಮ್ಮ ನಡೆ ಸ್ವಚ್ಛತಾ ಕಡೆ ‘ರನ್ ಫಾರ್ ಮಂಡ್ಯ’ ಮ್ಯಾರಾಥಾನ್

ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಸಾರ್ವಜನಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸಲು ಹಾಗೂ ಫಿಟ್‌ನೆಸ್ ಉತ್ತೇಜಿಸಲು ಮಾರ್ಚ್ 8 ರಂದು ಮಂಡ್ಯ ನಗರದ ಜಿಲ್ಲಾ ಕ್ರೀಡಾಂಗಣದಿಂದ “ನಮ್ಮ ನಡೆ ಸ್ವಚ್ಛತೆಯ ಕಡೆ -ರನ್ ಫಾರ್ ಮಂಡ್ಯ” ಮ್ಯಾರಾಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ್  ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿ ಗಳ ಕಚೇರಿಯಲ್ಲಿ ಸ್ವಚ್ಛ ಭಾರತ್ ಅಭಿಯಾನದಡಿ “ನಮ್ಮ ನಡೆ ಸ್ವಚ್ಛತೆಯ ಕಡೆ- ರನ್ ಫಾರ್ ಮಂಡ್ಯ” ಘೋಷವಾಕ್ಯದೊಂದಿಂಗೆ ಮ್ಯಾರಾಥಾನ್ ಕಾರ್ಯಕ್ರಮ ಹಮ್ಮಿಕೊಳ್ಳುವ ಸಂಬಂಧ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಮಾರ್ಚ್ 8 ರಂದು ಬೆಳಿಗ್ಗೆ 6 ಗಂಟೆಗೆ ಮಂಡ್ ನಗರದ ಸರ್. ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಿಂದ ಆರ್. ಪಿ. ರೋಡ್, ಸಂಜಯ ಸರ್ಕಲ್, , ಬೆಸರ ಬೆಸಗರಹಳ್ಳಿ, ಎಚ್ ಪಿ. ಸರ್ಕಲ್ ಮೂಲಕ ವಿಶ್ವೇಶ್ವರಯ್ಯ ಕ್ರೀಡಾಂಗಣಕಕ್ಕೆ ತಲುಪುವುದರಿಂದ ಅಗತ್ಯ ಸಿದ್ಥತೆ ಮತ್ತು ಬ್ಯಾರಿಕೆಡ್ ವ್ಯವಸ್ಥೆಯನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಮಾರ್ಚ್ 8 ರಂದು ನಡೆಯುವ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಬೇಕು. ಈ ಸಂಬಂಧ ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ, ಕುಡಿಯುವ ನೀರು, ಆಂಬುಲೆನ್ಸ್ ವ್ಯವಸ್ಥೆ ಹಾಗೂ ಉಪಹಾರದ ವ್ಯವಸ್ಥೆ ಮಾಡಿಕೊಳ್ಳಲು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ 5 ಕಿ.ಮೀ ಓಟವನ್ನು ಮ್ಯಾರಥಾನ್ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಿದ್ದು, ತೀರ್ಪುಗಾರನ್ನು ಅಂತಿಮ ಘಟ್ಟದಲ್ಲಿ ನೇಮಿಸಬೇಕು ಮತ್ತು ಕರಪತ್ರಗಳ ವಿತರಣೆ ಮತ್ತು ಟಿ ಶರ್ಟ್ ಕೌಂಟರ್ ಗಳನ್ನು ಮಾಡಬೇಕು. ಎಂದು ಸೂಚಿಸಿದರು.

ಈ ಕಾರ್ಯಕ್ರಮದಲ್ಲಿ ನಗರದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸರ್ಕಾರಿ ನೌಕರರು ಎನ್‌.ಜಿ.ಓಗಳು ಮತ್ತು ಸಾರ್ವಜನಿಕರು ಎಲ್ಲ ಸಂಘಟನೆಗಳು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಮ್ಯಾರಥಾನ್ ನಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರತ್ಯೇಕವಾಗಿ ಪುರುಷ ಮತ್ತು ಮಹಿಳೆಯರಿಗೆ ಪ್ರಥಮ – 10000,ದ್ವಿತೀಯ 5000,ತೃತೀಯ -3000 ನಗದು ಬಹುಮಾನವನ್ನು ವಿತರಿಸಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಮಂಡ್ಯ ಉಪ ವಿಭಾಗಾಧಿಕಾರಿ ಬಿ. ಸಿ. ಶಿವಮೂರ್ತಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ , ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನ ನಿರ್ದೇಶಕರಾದ ನರಸಿಂಹಮೂರ್ತಿ, ನಗರ ಸಭೆ ಆಯುಕ್ತರಾದ ಪಂಪಶ್ರೀ, ಹಾಗೂ ವಿವಿಧ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ