ರಾಜ್ಯ ಸರ್ಕಾರ ಕೈಗೊಳ್ಳಲಿರುವ ಸರ್ಕಾರಿ ನೇಮಕಾತಿಯಲ್ಲಿ ಒಳಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಮಳವಳ್ಳಿ ತಾಲೂಕಿನ ಡಾ ಬಾಬು ಜಗಜೀವನ ರಾಮ್ ಸಂಘಟನೆ ಮತ್ತು ಕರ್ನಾಟಕ ರಾಜ್ಯ ಮಾದರ ಮಹಾಸಭಾ ಸದಸ್ಯರು ಬೆಂಗಳೂರಿನ ನಿವಾಸದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಹಾಗೂ ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರ ಸ್ವಾಮಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಒಳ ಮೀಸಲಾತಿ ವಿಚಾರವಾಗಿ ಬಜೆಟ್ ಅಧಿವೇಶನದಲ್ಲಿ ಹಾಗೂ ತಾಂತ್ರಿಕ ಸಮಿತಿಗೆ 15% ಮೀಸಲಾತಿಯಲ್ಲಿ ಎಲ್ಲ ಸಮುದಾಯಕ್ಕೂ ಸಮಾನವಾಗಿ ಸಾಮಾಜಿಕ ನ್ಯಾಯ ಕೊಡುವ ನಿಟ್ಟಿನಲ್ಲಿ ಅಧಿವೇಶನದಲ್ಲಿ ಮಾತನಾಡಬೇಕೆಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿದ ಮಾತನಾಡಿದ ಶಾಸಕರು, ಪರಿಶಿಷ್ಟ ಜಾತಿಗೆ ಸೇರಿದ ಎಡಗೈ ಮತ್ತು ಬಲಗೈ ಸ್ಪ್ರಶ್ಯ ಸಮುದಾಯಕ್ಕೆ ಯಾವುದೇ ರೀತಿ ಅನ್ಯಾಯವಾಗದಂತೆ ಎಲ್ಲರನ್ನು ವಿಶ್ವಾಸಕ್ಕೆ ಒಳಗೊಂಡು ಒಳಮಿಸಲಾತಿಯನ್ನು ಜಾರಿಗೊಳಿಸುವುದರ ಜೊತೆಗೆ ಸರ್ಕಾರಿ ಉದ್ಯೋಗದಲ್ಲೂ ಸಹ ಎಡಗೈ ಮತ್ತು ಬಲಗೈ ಸಮುದಾಯಕ್ಕೆ ಸಾಮಾಜಿಕವಾಗಿ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಡಾ.ಬಾಬು ಜಗಜೀವನ್ ರಾಮ್ ವಿಚಾರ ವೇದಿಕೆಯ ಅಧ್ಯಕ್ಷ ಚಿಕ್ಕಲಿಂಗಯ್ಯ, ಮಾಜಿ ಅಧ್ಯಕ್ಷ ಹಿಟ್ಟನಹಳ್ಳಿ ಕೊಪ್ಪಲು ಮುತ್ತುರಾಜು, ಮಂಡ್ಯ ಜಿಲ್ಲಾ ಮಹಾಸಭಾ ಸಮಿತಿಯ ಸದಸ್ಯರಾದ ಬಾಳೆಹೊನ್ನಿಗ ಕುಮಾರ್ ಜಿ, ಮುಟ್ಟನಹಳ್ಳಿಯ ರಾಚಪ್ಪ ಎಂ ಎನ್, ಬಿಜಿಪುರ ಗ್ರಾಮದ ಮಂಜು, ರಘು, ಚಿಕ್ಕಲಿಂಗಯ್ಯ ಹಾಗೂ ಚಿಲ್ಲಾಪುರ ಗ್ರಾಮದ ಸಿದ್ದರಾಜು ಉಪಸ್ಥಿತರಿದ್ದರು.




