ಮದ್ದೂರು ತಾಲ್ಲೂಕಿನ ಭಾರತೀನಗರ ಸಮೀಪದ ಬೊಪ್ಪಸಮುದ್ರದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಮೂರು ದಿನಗಳ ಕಾಲ ಶಾಲೆಯನ್ನು ವಿಶೇಷ ರಂಗೋಲಿ, ತಳಿರು ತೋರಣ,ವಿದ್ಯುತ್ ದೀಪಾಲಂಕಾರದಿಂದ ಸಿಂಗರಿಸಿ 75ನೇ ಸ್ವಾತಂತ್ಯ ಅಮೃತ ಮಹೋತ್ಸವವನ್ನು ಸಡಗರದಿಂದ ಆಚರಣೆ ಮಾಡಲಾಯಿತು.
ಸ್ವಾತಂತ್ರ್ಯ ಹೋರಾಟಗಾರರ ವೇಷ ಧರಿಸಿದ ಮಕ್ಕಳು ಎತ್ತಿನ ಗಾಡಿಯಲ್ಲಿ ಹಾಗೂ ಗಾಂಧಿ ಟೋಪಿ ಧರಿಸಿ ರಾಷ್ಟ್ರ ಧ್ವಜ ಹಿಡಿದ ಮಕ್ಕಳು, ಶಿಕ್ಷಕರು, ಗ್ರಾಮಸ್ಥರು ಗ್ರಾಮದ ಎಲ್ಲಾ ಬೀದಿಗಳಲ್ಲಿ ಪಥ ಸಂಚಲನ ನಡೆಸಿದರು.

SDMC ಅಧ್ಯಕ್ಷರು ಆಯಾಯ ಶಾಲೆಗಳಲ್ಲಿ ದ್ವಜಾರೋಹಣ ನೆರವೇರಿಸಿದರು, ವೇದಿಕೆಯಲ್ಲಿ ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು,
SSLC ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ,ದಾನಿಗಳಿಗೆ ಸನ್ಮಾನಿಸಲಾಯಿತು, ಇಡೀ ಗ್ರಾಮದಲ್ಲಿ ಮೂರು ದಿನಗಳ ಕಾಲ ರಾಷ್ಟ್ರೀಯ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ SDMC ಅಧ್ಯಕ್ಷರು, ಸದಸ್ಯರು,ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು, ಕೃಷಿ ಪತ್ತಿನ ಸಹಕಾರ ಸಂಘ,ಹಾಲು ಉತ್ಪಾದಕರ ಸಹಕಾರ ಸಂಘ, ವಿವಿಧ ಸಂಘಗಳ ಅಧ್ಯಕ್ಷರು ಹಾಗೂ ಸದಸ್ಯರು, ಶಾಲಾ ಮುಖ್ಯಶಿಕ್ಷಕಿಯರು,ಶಿಕ್ಷಕರು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.




