Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ನಾಳೆ ನಮ್ಮ ನಡೆ ಸ್ವಚ್ಛತೆ ಕಡೆ ‘ರನ್ ಫಾರ್ ಮಂಡ್ಯ ಮ್ಯಾರಾಥಾನ್’

ಸ್ವಚ್ಛ ಭಾರತ್ ಮಿಷನ್ ಅಡಿಯಲ್ಲಿ ಸಾರ್ವಜನಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸಲು ಹಾಗೂ ಫಿಟ್‌ನೆಸ್ ಉತ್ತೇಜಿಸಲು ನಾಳೆ (ಮಾರ್ಚ್ 8)ಮಂಡ್ಯ ನಗರದ ಜಿಲ್ಲಾ ಕ್ರೀಡಾಂಗಣದಿಂದ “ನಮ್ಮ ನಡೆ ಸ್ವಚ್ಛತೆಯ ಕಡೆ -ರನ್ ಫಾರ್ ಮಂಡ್ಯ” ಮ್ಯಾರಾಥಾನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಂಡ್ಯ ಶಾಸಕ ರವಿಕುಮಾರ್ ತಿಳಿಸಿದ್ದಾರೆ.

ಮಾರ್ಚ್ 8 ರಂದು ಬೆಳಿಗ್ಗೆ 6 ಗಂಟೆಗೆ ಮಂಡ್ ನಗರದ ಸರ್. ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಿಂದ ಆರ್. ಪಿ. ರೋಡ್, ಸಂಜಯ ಸರ್ಕಲ್,ಬೆಸಗರಹಳ್ಳಿ, ಎಚ್ ಪಿ. ಸರ್ಕಲ್ ಮೂಲಕ ವಿಶ್ವೇಶ್ವರಯ್ಯ ಕ್ರೀಡಾಂಗಣಕಕ್ಕೆ ತಲುಪುವುದರಿಂದ ಅಗತ್ಯ ಸಿದ್ಥತೆ ಮತ್ತು ಬ್ಯಾರಿಕೆಡ್ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ಈ ಸಂಬಂಧ ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ, ಕುಡಿಯುವ ನೀರು, ಆಂಬುಲೆನ್ಸ್ ವ್ಯವಸ್ಥೆ ಹಾಗೂ ಉಪಹಾರದ ವ್ಯವಸ್ಥೆ ಮಾಡಿಕೊಳ್ಳಲು ಅಗತ್ಯ ಕ್ರಮ ವಹಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ನಗರದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳು ಸರ್ಕಾರಿ ನೌಕರರು ಎನ್‌.ಜಿ.ಓಗಳು ಮತ್ತು ಸಾರ್ವಜನಿಕರು ಎಲ್ಲ ಸಂಘಟನೆಗಳು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಶಾಸಕರು ತಿಳಿಸಿದ್ದು, ಮ್ಯಾರಥಾನ್ ನಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರತ್ಯೇಕವಾಗಿ ಪುರುಷ ಮತ್ತು ಮಹಿಳೆಯರಿಗೆ ಪ್ರಥಮ – 10000,ದ್ವಿತೀಯ 5000,ತೃತೀಯ -3000 ನಗದು ಬಹುಮಾನವನ್ನು ವಿತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ