ಕನ್ನಡ ಮಾಧ್ಯಮ ಮಂಡ್ಯ ಜಿಲ್ಲೆಯ 1463 ಶಾಲೆಗಳನ್ನ ಉಳಿಸಿ ಹಾಗೂ ಮಾಧ್ಯಮ ಶಾಲೆಗಳಿಗೆ ಅನುದಾನ ನೀಡಬೇಕೆಂದು ನಾಳೆ (ಮಾ.12) ಬೆಳಿಗ್ಗೆ 11 ಗಂಟೆಗೆ ಸಂಜಯ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡ ಪರ ಹೋರಾಟಗಾರರು ಭಾಗವಹಿಸುವಂತೆ ಕನ್ನಡ ಸೇನೆ ಮಂಡ್ಡಯ ಜಿಲ್ಲಾಧ್ಯಕ್ಷ ಹೆಚ್ ಸಿ.ಮಂಜುನಾಥ್ ಮನವಿ ಮಾಡಿದರು.
ವಾಟಾಳ್ ನಾಗರಾಜ್ ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ ಆರ್ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳ ಸ್ಥಿತಿಗತಿ ಶೋಚನೀಯವಾಗಿದೆ. ಕನ್ನಡಿಗರ ತೆರಿಗೆ ಹಣದಲ್ಲಿ ಆಡಳಿತ ನಡೆಸುವ ಸರ್ಕಾರಕ್ಕೆ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಲು ಯಾಕೆ ಮೀನಮೇಷ ಏಣಿಸುತ್ತಿದೆ ಎಂದು ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕನ್ನಡ ಶಾಲೆಗಳಿಗೆ ಅನುದಾನ ನೀಡಲು ಸರ್ಕಾರದ ಬಳಿ ಹಣವಿಲ್ಲವೇ? 30 ವರ್ಷಗಳಿಂದ ಕನ್ನಡ ಶಾಲೆಗಳನ್ನು ಕತ್ತಲೆಯಲ್ಲಿ ಇಟ್ಟಿದ್ದೀರಿ. ಶಾಲಾ ಕಟ್ಟಡಗಳು ಕುಸಿದು ಬೀಳುತ್ತಿವೆ. ಶಿಕ್ಷಕರ ಕೊರತೆಯಿದೆ. ಈ ಕೂಡಲೇ ವಿಶೇಷ ಪ್ಯಾಕೇಜ್ ಮೂಲಕ ಕನ್ನಡ ಮಾಧ್ಯಮ ಶಾಲೆಗಳನ್ನು ಸಬಲೀಕರಣಗೊಳಿಸಬೇಕೆಂದು ಆಗ್ರಹಿಸಿದ್ದಾರೆ.
ಅತಿ ಹೆಚ್ಚು ಕನ್ನಡ ಮಾತಾಡುವ ಮಂಡ್ಯ ಜಿಲ್ಲೆಯ ಜನ ಕನ್ನಡದ ಸ್ವಾಭಿಮಾನಿಗಳು ಹೆಚ್ಚು ರೀತಿಯಲ್ಲಿ ಭಾಗವಹಿಸಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದ್ದಾರೆ.




