Friday, November 20, 2026

ಪ್ರಾಯೋಗಿಕ ಆವೃತ್ತಿ

ಆ.18 ರಂದು ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ  ಮಂಡ್ಯ ವಿಶ್ವವಿದ್ಯಾಲಯದಲ್ಲಿ ಆಗಸ್ಟ್ 18 ರಂದು ಮೈಸೂರು ವಿಭಾಗೀಯ ಮಟ್ಟದ ವಿಜ್ಞಾನ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಮಂಡ್ಯ ವಿಶ್ವವಿದ್ಯಾಲಯದ ವಿಜ್ಞಾನ ನಿಕಾಯ ನಿರ್ದೇಶಕ ಡಾ.ರಘು ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮನುಕುಲಕ್ಕಾಗಿ ವಿಜ್ಞಾನ ತಂತ್ರಜ್ಞಾನ ಮತ್ತು ಆವಿಷ್ಕಾರ ಎಂಬ ಕೇಂದ್ರ ವಿಷಯದಡಿಯಲ್ಲಿ ಶುದ್ಧ ಮತ್ತು ಹಸಿರು ಶಕ್ತಿ,ಆಹಾರ, ಆರೋಗ್ಯ ಮತ್ತು ನೈರ್ಮಲ್ಯ,ಬಾಹ್ಯಾಕಾಶ ಹುಡುಕಾಟ, ಪರಿಸರಸ್ನೇಹಿ ತಂತ್ರಜ್ಞಾನ ಮತ್ತು ಪ್ಲಾಸ್ಟಿಕ್ ಮಾಲಿನ್ಯ ನಿಯಂತ್ರಣ, ಜೈವಿಕ ತಂತ್ರಜ್ಞಾನ ಮತ್ತು ಆರೋಗ್ಯ ಈ ಐದು ಉಪ ಶೀರ್ಷಿಕೆ ಗಳ ಮೇಲೆ ವಿಜ್ಞಾನ ವಸ್ತು ಪ್ರದರ್ಶನ ನಡೆಯಲಿದೆ ಎಂದರು.

ಈಗಾಗಲೇ ಮಂಡ್ಯ,ಮೈಸೂರು,ಹಾಸನ,ಚಾಮರಾಜನಗರದಿಂದ 25ಕ್ಕೂ ಹೆಚ್ಚು ಕಾಲೇಜುಗಳು ನೊಂದಾವಣೆ ಮಾಡಿಕೊಂಡಿದ್ದು,ನಾಳೆ ಮತ್ತಷ್ಟು ಕಾಲೇಜುಗಳು ನೊಂದಾವಣೆ ಆಗಲಿದೆ.12 ರಿಂದ 4 ಗಂಟೆಯವರೆಗೆ ಸಾರ್ವಜನಿಕರು ಹಾಗೂ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ವೀಕ್ಷಿಸಲು ಅವಕಾಶವಿರುತ್ತದೆ ಎಂದು ತಿಳಿಸಿದರು.
ವಸ್ತು ಪ್ರದರ್ಶನ ಸ್ಪರ್ಧೆಯ ಬಗ್ಗೆ ತೀರ್ಪುಗಾರರು ತೀರ್ಪು ಪ್ರಕಟಿಸಲಿದ್ದಾರೆ.

ಮೊದಲ ಬಹುಮಾನ ರೂ.5೦೦೦,
ದ್ವಿತೀಯ ಬಹುಮಾನ ರೂ.4೦೦೦
ತೃತೀಯ ಬಹುಮಾನ ರೂ.3೦೦೦ ಹಾಗೂ ಎರಡು ಸಮಾಧಾನಕರ ಬಹುಮಾನ ತಲಾ ರೂ.2೦೦೦ ಇರಲಿದ್ದು, ಸಂಜೆ 4 ಗಂಟೆಗೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಬಹುಮಾನ ನೀಡಲಾಗುತ್ತದೆ ಎಂದರು.

ಸುದ್ದಿಗೋಷ್ಟಿಯಲ್ಲಿ ಸಹ ಪ್ರಾಧ್ಯಾಪಕ ಬಿ.ಸಿ.ಕರೀಗೌಡ, ಯೋಗಾನರಸಿಂಹ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ