Monday, November 23, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಮದ್ದೂರು ನಗರಸಭೆಗೆ ಗ್ರಾಮಗಳ ಸೇರ್ಪಡೆ ವಿರೋಧಿಸಿ ಆಕ್ಷೇಪಣೆ ಸಲ್ಲಿಕೆ

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಬಳಿ ಮದ್ದೂರು ನಗರಸಭೆ ವ್ಯಾಪ್ತಿಯ ಗೆಜ್ಜಲಗೆರೆ ಗ್ರಾಮಸ್ಥರು ಮತ್ತು ಅಕ್ಕಪಕ್ಕದ ಗ್ರಾಮಸ್ಥರು ಜಮಾವಣೆಗೊಂಡು ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಮಗಳ ಸೇರ್ಪಡೆಗೆ ಆಕ್ಷೇಪಣಾ ಪತ್ರವನ್ನು ಜಿಲ್ಲಾಧಿಕಾರಿ ಮತ್ತು ಚುನಾವಣಾ ಅಧಿಕಾರಿಗಳಿಗೆ ಸಲ್ಲಿಸಿದರು.

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಹಾಗೂ ಅಕ್ಕಪಕ್ಕದ ಗ್ರಾಮಗಳನ್ನು ಮದ್ದೂರು ನಗರ ಸಭೆಯ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿದರು.

ಬಳಿಕ ಮಾತನಾಡಿದ ರೈತ ನಾಯಕಿ ಸುನಂದ ಜಯರಾಮ್, ಮದ್ದೂರು ನಗರಸಭೆ ಗೆ ಗ್ರಾಮಗಳ ಸೇರ್ಪಡೆ ವಿರೋಧಿಸಿ ನೂರು ದಿನಗಳ ಹೋರಾಟ ನಡೆಯುತ್ತಿದೆ ಸ್ಥಳಕ್ಕೆ ಅಧಿಕಾರಿಗಳಾಗಲಿ ಅಥವಾ ಸಂಬಂಧಪಟ್ಟ ಸಚಿವರಾಗಲಿ ಭೇಟಿ ನೀಡಿಲ್ಲ ಎಂದು ಕಿಡಿಕಾರಿದರು.

ಕರಡು ಅಧಿಸೂಚನೆಗೆ ಮದ್ದೂರು ತಾಲ್ಲೂಕು, ಗೆಜ್ಜಲಗೆರೆ ಗ್ರಾಮಸ್ಥರು ಆಕ್ಷೇಪಣೆಯನ್ನು ಸಲ್ಲಿಸುತ್ತಿದ್ದೇವೆ. ಗೆಜ್ಜಲಗೆರೆ ಗ್ರಾಮವನ್ನು ಮದ್ದೂರು ನಗರ ಸಭೆಗೆ ಸೇರ್ಪಡೆ ಮಾಡಿರುವುದು ಸಂಪೂರ್ಣ ಕಾನೂನು ಬಾಹಿರವಾಗಿದ್ದು, ಈ ಸಂಬಂಧ ಸೇರ್ಪಡೆಯನ್ನು ಗ್ರಾಮಸ್ಥರು ವಿರೋಧಿಸುತ್ತಿದ್ದೇವೆ ಎಂದು ಎಚ್ಚರಿಸಿದರು.

ಗ್ರಾಮವನ್ನು ತಾವು 30/31 ಎಂಬ ಸಂಖ್ಯೆಯ 2 ವಾರ್ಡ್‌ಗಳನ್ನಾಗಿ ಘೋಷಿಸಿರುವುದನ್ನು ನಾವು ಸಮ್ಮತಿಸುವುದಿಲ್ಲ. ತಾವು ಹೊರಡಿಸಿರುವ ಕರಡು ಪ್ರತಿಗೆ ವಿರೋಧವಿದೆ ಎಂದು ಆಕ್ರೋಶ ವ್ಯಕ್ತ ಪಡಿದರು.

ಇದೇ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಜಿ.ಟಿ. ಚಂದ್ರಶೇಖರ್, ಪ್ರತಾಪ್ ವೀರೇಶ್ ನಾರಾಯಣ, ಅನುಪಮ, ಚಂದ್ರಶೇಖರ್ ಸತ್ಯಾವತಿ, ಶಾಂತಮ್ಮ, ಮೋಹನ್

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ