Friday, November 20, 2026

ಪ್ರಾಯೋಗಿಕ ಆವೃತ್ತಿ

ತಂಬಾಕು ನಿಯಂತ್ರಣ ಕಾಯ್ದೆ ಅನುಷ್ಠಾನಗೊಳಿಸಿ

ಜಿಲ್ಲೆಯಾದ್ಯಂತ ತಂಬಾಕು ನಿಯಂತ್ರಣ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹಾಗೂ ಜಿಲ್ಲೆಯ ಎಲ್ಲಾ ವಿದ್ಯಾಸಂಸ್ಥೆಗಳ ವ್ಯಾಪ್ತಿಯಲ್ಲಿ ತಂಬಾಕು ಮುಕ್ತಗೊಳಿಸಲು ಜಿಲ್ಲಾ ಸರ್ವೇಕ್ಷಣ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹಮ್ಮಿಕೊಂಡಿರುವ ನಿರಂತರ ಕೋಟ್ಪಾ ಕಾರ್ಯಾಚರಣೆ ಇಂದು ನಾಗಮಂಗಲ ತಾಲ್ಲೂಕಿನ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ನಾಗಮಂಗಲ ತಾಲ್ಲೂಕಿನಲ್ಲಿ ನಿಯಮಬಾಹಿರವಾಗಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಬಳಕೆಯಲ್ಲಿ ತೊಡಗಿದ್ದವರಿಗೆ ಟಿಹೆಚ್ಓ ಡಾ.ಪ್ರಸನ್ನರವರ ನೇತೃತ್ವದಲ್ಲಿ ಕೋಟ್ಪಾ ಕಾರ್ಯಾಚರಣೆ ನಡೆಸಿ ದಂಡ ವಿಧಿಸಲಾಯಿತು.

ಈ ಕಾರ್ಯಾಚರಣೆಯಲ್ಲಿ ಸೆಕ್ಷನ್ 4 ರ ಅಡಿಯಲ್ಲಿ 31 ಪ್ರಕರಣ ದಾಖಲಿಸಿ ರೂ. 6000/- ದಂಡ ಹಾಗೂ 6ಬಿ ಅಡಿಯಲ್ಲಿ 10 ಪ್ರಕರಣ ದಾಖಲಿಸಿ ರೂ. 1600/- ದಂಡ ಒಟ್ಟಾರೆಯಾಗಿ 41 ಪ್ರಕರಣ ದಾಖಲಿಸಿ 7600/- ದಂಡ ವಿಧಿಸಲಾಯಿತು.

ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ಕರಪತ್ರಗಳನ್ನು ವಿತರಿಸಿ ಕೋಟ್ಪಾ ಕಾಯಿದೆ ಹಾಗೂ ಟಿಸಿಸಿಯ ಉಚಿತ ಸೇವಾ ಸೌಲಭ್ಯಗಳ ಬಗ್ಗೆ ಅರಿವು ನೀಡಲಾಯಿತು.

ಈ ಕಾರ್ಯಾಚರಣೆಯಲ್ಲಿ ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ಪ್ರಸನ್ನ, ಜಿಲ್ಲಾ ಸಲಹೆಗಾರರಾದ ತಿಮ್ಮರಾಜು ಎಸ್.ಎನ್, ಸಾಮಾಜಿಕ ಕಾರ್ಯಕರ್ತರಾದ ಮೋಹನ್ ಕುಮಾರ್ ವೈ.ಕೆ, ಪ್ರಭಾರ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಸಿದ್ದಲಿಂಗಯ್ಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಚಿಕ್ಕಸ್ವಾಮಿ ಹಾಗೂ ಎಎಸ್ಐ ಸಿದ್ದರಾಜು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ