Tuesday, November 24, 2026

ಪ್ರಾಯೋಗಿಕ ಆವೃತ್ತಿ

ವಿಶ್ವ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾದ ಪುಣ್ಯಸ್ವರೂಪ್ ಗೆ ಸಚ್ಚಿದಾನಂದ ಅಭಿನಂದನೆ

ಮಂಡ್ಯ : ಕೆಟಲ್‌ಬೆಲ್ ಕ್ರೀಡೆಯಲ್ಲಿ ವಿಶ್ವ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿರುವ ಶ್ರೀರಂಗಪಟ್ಟಣ ತಾಲೂಕು ಹೊಸ ಆನಂದೂರು ಗ್ರಾಮದ ಹನುಮಂತಚಾರ್ ಅವರ ಮಗ ಪುಣ್ಯಸ್ವರೂಪ್ ಅವರನ್ನು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮುಖಂಡ ಎಸ್. ಸಚ್ಚಿದಾನಂದ ಸನ್ಮಾನಿಸಿ ಗೌರವಿಸಿದರು.

ನಂತರ ಮಾತನಾಡಿದ ಅವರು, ಕೆಟಲ್‌ಬೆಲ್‌ನಂತಹ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ಸಿಗುವುದಿಲ್ಲ. ಆದರೆ ಗ್ರಾಮೀಣ ಪ್ರದೇಶದ ಮಕ್ಕಳೂ ಸಹ ಇಂತಹ ಕ್ರೀಡೆಯಲ್ಲಿ ಸಾಧನೆ ಮಾಡುತ್ತಿದ್ದಾರೆ. ಸರ್ಕಾರ ಇದನ್ನು ಗಮನಿಸಿ ಗ್ರಾಮೀಣ ಕ್ರೀಡಾಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಒತ್ತಾಯಿಸಿದರು.

ಪುಣ್ಯಸ್ವರೂಪ್ ಅವರು ಬಾಲ್ಯದಿಂದಲೇ ಕಾರ್ಫ್‌ಬಾಲ್, ಪ್ಲೈಯಿಂಗ್ ಬಾಲ್, ಬ್ಯಾಡ್ಮಿಂಟನ್, ಬ್ಯಾಸ್ಕೆಟ್‌ಬಾಲ್ ಮತ್ತು ಅಥ್ಲೆಟ್‌ಗಳಲ್ಲಿ ಸಾಧನೆ ಮಾಡಿದ್ದು, ಸಧ್ಯ ಮೈಸೂರಿನ ಹೆಬ್ಬಾಳದ ಕೆ.ಎಂ.ಸಿ. ಇನ್ನೋವೇಟಿವ್ ಕಾಲೇಜಿನಲ್ಲಿ ಪ್ರಥಮ ಪಿಯುನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಹಲವು ಕ್ರೀಡೆಗಳನ್ನು ಅಭ್ಯಾಸ ಮಾಡಿರುವ ಪುಣ್ಯಸ್ವರೂಪ ಕೆಟಲ್‌ಬಾಲ್‌ನಲ್ಲೂ ಅದ್ವಿತೀಯ ಸಾಧನೆ ಮಾಡುವ ಮೂಲಕ ನವದೆಹಲಿಯಲ್ಲಿ ನಡೆಯುವ ಕೆಟಲ್‌ಬಾಲ್ ವಿಶ್ವಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುದತ್ತಿದ್ದಾರೆ ಎಂದು ಹೇಳಿದರು.

ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಸಿಕ್ಕಲ್ಲಿ ಅವರೂ ಸಹ ನಗರ ಪ್ರದೇಶದವರಂತೆ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಜೊತೆಗೆ ಒಲಂಪಿಕ್‌ನಂತಹ ಕ್ರೀಡೆಗಳಲ್ಲೂ ಭಾಗವಹಿಸಲು ಅರ್ಹರಾಗುತ್ತಾರೆ. ಕೇಂದ್ರ ಸರ್ಕಾರ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಇದರೊಂದಿಗೆ ರಾಜ್ಯ ಸರ್ಕಾರವೂ ಸಹ ಗ್ರಾಮೀಣ ಪ್ರದೇಶದಲ್ಲಿನ ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಆಗ್ರಹಿಸಿದರು.

ಪುಣ್ಯಸ್ವರೂಪ್ ಅವರು ಪಂಜಾಬ್‌ನಲ್ಲಿ ನಡೆದ ರಾಷ್ಟ್ರಮಟ್ಟದ ಕಾಫ್‌ಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾರೆ. ತೆಲಂಗಾಣದಲ್ಲಿ ನಡೆದ ರಾಷ್ಟ್ರ ಮಟ್ಟದ ಕಿರಿಯರ ಕೆಟಲ್‌ಬಾಲ್ ಪಂದ್ಯಾವಳಿ, ರಾಜಸ್ತಾನದ ಟೂರ್ನಿಯಲ್ಲಿ ನಡೆದ ಪಂದ್ಯಾವಳಿಯಲ್ಲೂ ಬಹುಮಾನ ಪಡೆದಿದ್ದಾರೆ. ಪ್ರಸಕ್ತ ಸಾಲಿನಲ್ಲಿ ದೆಹಲಿಯಲ್ಲಿ ನಡೆಯುವ ಕೆಟಲ್‌ಬಾಲ್ ವಿಶ್ವಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುವ ಮೂಲಕ ಮಂಡ್ಯ ಗರಿಮೆಯನ್ನು ಹೆಚ್ಚಿಸಿದ್ದಾರೆ ಎಂದು ಶ್ಲಾಘಿಸಿದರು.

ಮುಖಂಡರಾದ ಪ್ರದೀಪ್ ಬೈರೇಗೌಡ, ರಾಜೇಶ್, ರಾಮಚಂದ್ರು, ಪ್ರಮೋದ್, ಮಾದೇಗೌಡ, ಸಚಿನ್, ಗಣೇಶ್ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ