Monday, November 23, 2026

ಪ್ರಾಯೋಗಿಕ ಆವೃತ್ತಿ

ದೈತಮ್ಮ ದೇವಸ್ಥಾನಕ್ಕೆ ಆರ್ಥಿಕ ನೆರವು ನೀಡಿದ ಮುದ್ದನಘಟ್ಟ ಮಹಾಲಿಂಗೇಗೌಡ

ಮಂಡ್ಯ ತಾಲ್ಲೂಕು, ಕೆರಗೋಡು ಹೋಬಳಿ, ಮೋಳೆಕೊಪ್ಪಲು ಗ್ರಾಮದ ಗಂಗಾಮತಸ್ಥ ಸಮಾಜದ ಮುಖಂಡರುಗಳು ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮುಖಂಡ, ತಾಯಮ್ಮ ರಾಮೇಗೌಡ ಚಾರಿಟಬಲ್ ಟ್ರಸ್ಟ್‌ ಅಧ್ಯಕ್ಷ ಮಹಾಲಿಂಗೇಗೌಡ ಮುದ್ದನಘಟ್ಟರವರನ್ನು ತಮ್ಮ ಗ್ರಾಮದಲ್ಲಿರುವ ದೈತಮ್ಮ ದೇವಿಯ ಪೂಜಾ ಕಾರ್ಯಕ್ರಮಕ್ಕೆ ಆಹ್ವಾನಿಸಿ, ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸಹಕಾರ ಕೋರಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಮುಖಂಡ ಮುದ್ದನಘಟ್ಟ ಮಹಾಲಿಂಗೇಗೌಡ, ಈ ಗ್ರಾಮವು ಅತಿ ಹಿಂದುಳಿದ ಗ್ರಾಮವಾಗಿದ್ದು, ಮಂಡ್ಯ ಕ್ಷೇತ್ರದ ಜನಪ್ರಿಯ ಶಾಸಕರಾದ ಎಂ.ಶ್ರೀನಿವಾಸ್ ಅವರ ಸಲಹೆ, ಮಾರ್ಗದರ್ಶನದಂತೆ ದೇವಾಲಯದ ನಿರ್ಮಾಣಕ್ಕೆ ಸಂಪೂರ್ಣ ಸಹಕಾರ ನೀಡುವುದರ ಜೊತೆಗೆ ಗ್ರಾಮದ ಬಡಕುಟುಂಬದ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಹಾಗೂ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಗುವುದೆಂದು ತಿಳಿಸಿದರು.

ಮಕ್ಕಳ ವಿದ್ಯಾಭ್ಯಾಸಕ್ಕೆ ನಮ್ಮ ಟ್ರಸ್ಟ್‌ ಮೂಲಕ ಆರ್ಥಿಕ ನೆರವು ನೀಡುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಯುವ ಮುಖಂಡ ಭೈರೇಶ್,ಗ್ರಾಮಸ್ಥರು ಹಾಗೂ ಅರ್ಚಕರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ