Saturday, November 21, 2026

ಪ್ರಾಯೋಗಿಕ ಆವೃತ್ತಿ

ಜಿಲ್ಲೆಯಾದ್ಯಂತ ಸಂಭ್ರಮದ ಗಣೇಶೋತ್ಸವ ಆಚರಣೆ

ಕೋವಿಡ್ ಕಾರಣದಿಂದ ಕಳೆದೆರಡು ವರ್ಷಗಳಿಂದ ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡಿರಲಿಲ್ಲ. ಈ ವರ್ಷ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆ ಯಾಗಿರುವುದು ಹಾಗೂ ಬಹುತೇಕ ಎಲ್ಲರಿಗೂ ಲಸಿಕೆ ನೀಡಿರುವ ಕಾರಣದಿಂದ ಸರ್ಕಾರ ಯಾವುದೇ ರೀತಿಯ ನಿರ್ಬಂಧ ವಿಧಿಸದಿರುವಿದರಿಂದ ಗೌರಿ-ಗಣೇಶ ಹಬ್ಬಕ್ಕೆ ಯಾವುದೇ ಅಡ್ಡಿ-ಆತಂಕವಿಲ್ಲದೆ ಜಿಲ್ಲೆಯಾದ್ಯಂತ ಸಂಭ್ರಮದಿಂದ ನಡೆದಿದೆ.

ಜಿಲ್ಲೆಯಾದ್ಯಂತ ಚಿಕ್ಕ ಮಕ್ಕಳು, ಯುವಕರು, ಹಿರಿಯರು ಎಲ್ಲರೂ ಸೇರಿ ಈ ಬಾರಿ ಗೌರಿ-ಗಣೇಶನ ಪೂಜಾ ಕೈಂಕರ್ಯದಲ್ಲಿ ತೊಡಗಿದ್ದಾರೆ. ಅದರಲ್ಲೂ ಯುವ ಜನತೆ ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆ ಮಾಡುವ ಮೂಲಕ ಕಳೆದ ಎರಡು ವರ್ಷಗಳಿಂದ ನೆನಗುದಿಗೆಬಿದ್ದಿದ್ದ ಗಣೇಶೋತ್ಸವವನ್ನು ಅದ್ದೂರಿಯಾಗಿ ಆಚರಣೆ ಮಾಡಿದೆ.

 

ಈ ಬಾರಿಯ ಗಣೇಶ ಉತ್ಸವಕ್ಕೆ ಯಾವುದೇ ನಿರ್ಬಂಧ ಇಲ್ಲದ ಕಾರಣ ಯುವಕರು ಮನೆಮನೆಯಿಂದ ಚಂದಾ ಎತ್ತಿ, ರಾಜಕಾರಣಿಗಳಿಂದ ಗಣೇಶ ಮೂರ್ತಿಗಳನ್ನು ಪಡೆದು ಬಹಳ ಉತ್ಸಾಹದಿಂದ ಗಣೇಶ ಹಬ್ಬ ಆಚರಿಸಿದ್ದಾರೆ.

ಆಗಸ್ಟ್ 30ರ ಗೌರಿ ಹಬ್ಬದ ದಿನ ಹೆಣ್ಣು ಮಕ್ಕಳು ಹೊಸ ಉಡುಗೆಯನ್ನು ತೊಟ್ಟು, ದೇವಸ್ಥಾನಗಳಿಗೆ ತೆರಳಿ ಗೌರಿ ಹಾಗೂ ಗಣೇಶನ ದರ್ಶನ ಪಡೆದರು.ಹಲವೆಡೆ ಹೆಣ್ಣು ಮಕ್ಕಳು ಹುತ್ತಕ್ಕೆ ತನಿ ಎರೆದು ಸಂಭ್ರಮ ಪಡುತ್ತಿದ್ದ ದೃಶ್ಯ ಕಂಡು ಬಂತು. ಹಲವಡೆ ಮಹಿಳೆಯರಿಗೆ ಅರಿಶಿನ, ಕುಂಕುಮ, ಬಳೆ ನೀಡಿ ಬಾಗಿನ ನೀಡಲಾಯಿತು.

ಹಲವು ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿತು. ಅದರಲ್ಲೂ ಗಣಪತಿ ದೇವಸ್ಥಾನಗಳಲ್ಲಿ ವಿನಾಯಕನಿಗೆ ವಿಶೇಷ ವಾಗಿ ಹೂವಿನಿಂದ ಅಲಂಕಾರ ಮಾಡಿ ಪೂಜೆ ನೆರವೇರಿಸಲಾಯಿತು.

ಜನರು ಭಕ್ತಿ ಭಾವದಿಂದ ಗೌರಿ-ಗಣೇಶನ ಆರಾಧನೆ ಮಾಡುವ ಮೂಲಕ ದೇವರ ಕೃಪೆಗೆ ಪಾತ್ರರಾದರು.

ಎಲ್ಲಾ ಗ್ರಾಮಗಳಲ್ಲೂ ಈ ಬಾರಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಯುವಜನತೆ ಸಂಭ್ರಮದಿಂದ ಪೂಜೆ ನೆರವೇರಿಸಿದರು. ಈ ಬಾರಿ ಜಿಲ್ಲೆಯ ಹಲವು ರಾಜಕಾರಣಿಗಳು ತಮ್ಮ ಸಂಸ್ಥೆಯ ವತಿಯಿಂದ ಗಣೇಶ ಮೂರ್ತಿಗಳನ್ನು ವಿತರಿಸುವ ಮೂಲಕ ಯುವಜನತೆಗೆ ಪ್ರೋತ್ಸಾಹ ಮಾಡಿದ್ದು ವಿಶೇಷವಾಗಿತ್ತು.

ಒಟ್ಟಾರೆ ಜಿಲ್ಲೆಯ ಎಲ್ಲೆಡೆ ಈ ಬಾರಿ ಗೌರಿ-ಗಣೇಶ ಹಬ್ಬಕ್ಕೆ ಯಾವುದೇ ನಿರ್ಬಂಧ ಹಾಕದ ಕಾರಣ ಎಲ್ಲೆಡೆ ನಿರಾತಂಕವಾಗಿ ಗಣೇಶೋತ್ಸವ ನಡೆಯಿತು.ಜನರು ಕೂಡ ಸಂಭ್ರಮದಿಂದ ಗೌರಿ ಗಣೇಶ ಹಬ್ಬ ಆಚರಿಸಿಸುವ ಮೂಲಕ ದೇವರ ಕೃಪೆಗೆ ಪಾತ್ರರಾದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ