ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 5 ಸಾವಿರ ಉಚಿತ ಲ್ಯಾಪ್‌ಟಾಪ್ ವಿತರಣೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿರುವುದು ಸ್ವಾಗತಾರ್ಹ.ಅದೇ ರೀತಿಯಲ್ಲಿ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಪ್ರತಿಭಾವಂತ ಎಲ್ಲ ಬಡ ವಿದ್ಯಾರ್ಥಿಗಳಿಗೂ ಉಚಿತವಾಗಿ ಲ್ಯಾಪ್ ಟಾಪ್ ವಿತರಣೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಬಿ.ಎಸ್.ಶಿವಣ್ಣ ಆಗ್ರಹಿಸಿದ್ದಾರೆ.
ಶುಕ್ರವಾರ ಈ ಸಂಬಂಧ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಅವರು, ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಉನ್ನತಿಗೆ ಸರಕಾರ ಅಗತ್ಯ ನೆರವು ನೀಡಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ಬಿಪಿಎಲ್ ಪಡಿತರ ಚೀಟಿ ಹೊಂದಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡಬೇಕು.ಇದರಿಂದ ವಿದ್ಯಾರ್ಥಿಗಳು ಇನ್ನೂ ಚೆನ್ನಾಗಿ ಅಧ್ಯಯನ ಮಾಡಲು ಸಾಧ್ಯ.ಆದ್ದರಿಂದಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎಲ್ಲಾ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್‌ಟಾಪ್ ನೀಡಬೇಕೆಂದು ಆಗ್ರಹಿಸಿದ್ದಾರೆ.




