Tuesday, November 24, 2026

ಪ್ರಾಯೋಗಿಕ ಆವೃತ್ತಿ

ವಿಶ್ವಕರ್ಮ ಜಯಂತಿ ಯಶಸ್ವಿಯಾಗಿ ಆಚರಿಸಲು ಸಹಕರಿಸಿ

ವಿಶ್ವಕರ್ಮ ಜಯಂತಿಯು ಸೆ. 17 ರಂದು ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ನಡೆಯಲಿದ್ದು, ಕಾರ್ಯಕ್ರಮವು ಯಶಸ್ವಿಯಾಗಿ ಆಚರಿಸಲು ಎಲ್ಲರೂ ಸಹಕರಿಸಬೇಕೆಂದು‌ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್ ನಾಗರಾಜುರವರು ತಿಳಿಸಿದರು.

ಮಂಡ್ಯದ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ವಿಶ್ವಕರ್ಮ ಜಯಂತಿಯ ಸಂಬಂಧ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಂದು ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗಲಿದ್ದು, ವಿಶ್ವಕರ್ಮ ಜಯಂತಿಯ ಉದ್ದೇಶವನ್ನು ಎಲ್ಲರಿಗೂ ತಿಳಿಸುವಂತ ಕೆಲಸ ಆಗಬೇಕು ಎಂದರು.

ತಾಲ್ಲೂಕು ಹಂತದಲ್ಲಿ ವಿಶ್ವಕರ್ಮ ಜಯಂತಿ ಕುರಿತು ಪೂರ್ವಭಾವಿ ಸಭೆ ನಡೆಸಬೇಕು. ಬಹಳ ಅಚ್ಚುಕಟ್ಟಾಗಿ ಮಾಡಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

ಮುಖ್ಯ ಪ್ರಧಾನ ಭಾಷಣಕಾರರಾಗಿ ಆಯ್ಕೆ ಮಾಡುವ ಸಂಬಂಧ ಚರ್ಚೆ ಮಾಡಲಾಯಿತು. ಉಪಾಹಾರ ವ್ಯವಸ್ಥೆ ಹಾಗೂ ಇನ್ನಿತರ ವ್ಯವಸ್ಥೆಯನ್ನು ಸುಸಜ್ಜಿತವಾಗಿ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಎನ್. ಉದಯ್ ಕುಮಾರ್, ಉದ್ಯೋಗ ವಿನಿಮಯ ಅಧಿಕಾರಿ ವೇಣುಗೋಪಾಲ್, ಜಿಲ್ಲಾ ಆಯುಷ್ ಅಧಿಕಾರಿ ಮಧು ಮಾಲತಿ, ತಿರುಮಲಚಾರ್ಯ, ಬಿಜೆಪಿ ಮುಖಂಡ ಎಂ.ಬಿ.ರಮೇಶ್ ವಿವಿಧ ಸಂಘ ಸಂಸ್ಥೆಯ ಮುಖಂಡರು, ತಿರುಮಾಲ ಚಾರ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ