Thursday, September 19, 2024

ಪ್ರಾಯೋಗಿಕ ಆವೃತ್ತಿ

ಜನರ ತೆರಿಗೆ ಹಣ ಲೂಟಿ ಮಾಡುತ್ತಿದ್ದಾರೆ

ಇಂದು ದೇಶ ಮತ್ತು ರಾಜ್ಯದ ರಾಜಕಾರಣ ನೋಡುತ್ತಿದ್ದರೆ,ರೈತರ ವಿಷಯದಲ್ಲಿ ಈಗಿನ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿ ಸರಿಯಾಗಿಲ್ಲ. ಯುವಕರಿಗೆ ಉದ್ಯೋಗ ಕಲ್ಪಿಸುವಲ್ಲಿ ವಿಫಲವಾಗಿದ್ದು, ನಾಡಿನ ಜನತೆ ಕಟ್ಟುವ ತೆರಿಗೆ ಹಣದಲ್ಲಿ ಸ್ವೇಚ್ಛಾಚಾರ ನಡೆದು ಲೂಟಿ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹರಿಹಾಯ್ದರು.

ನಾಗಮಂಗಲ ತಾಲೂಕಿನ ಚಿಕ್ಕ ಜಕ್ಕನಹಳ್ಳಿ ಗ್ರಾಮದಲ್ಲಿ ಮನ್ ಮುಲ್ ನಿರ್ದೇಶಕ ರವಿಯವರ ಮನೆಯಲ್ಲಿ ನಡೆದ ನಾಮಕರಣ ಸಮಾರಂಭದಲ್ಲಿ ಭಾಗವಹಿಸಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು‌.

ಈಗಿನ ಸರ್ಕಾರಗಳು ರೈತರ ಸಮಸ್ಯೆಯನ್ನು ಬಗೆಹರಿಸಲು ಮುಂದಾಗುತ್ತಿಲ್ಲ.ಈ ಹಿನ್ನೆಲೆಯಲ್ಲಿ ರೈತರ ಪರವಾಗಿ ಹೋರಾಟ ಮಾಡುವ ಜೆಡಿಎಸ್ ಪಕ್ಷಕ್ಕೆ ಜನರು ಆಶೀರ್ವಾದ ಮಾಡಬೇಕು.

ನಾಗಮಂಗಲ ತಾಲೂಕಿನ ಜನರು ದೇವೇಗೌಡರ ಬಗ್ಗೆ ಅಪಾರ ಅಭಿಮಾನ ಇಟ್ಟುಕೊಂಡಿದ್ದಾರೆ. ನಿಮ್ಮ ಪಕ್ಷ ಜೆಡಿಎಸ್ ಅನ್ನು ನೀವೇ ಬೆಳಸಬೇಕು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸುರೇಶ್ ಗೌಡರನ್ನ ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಿಕೊಡಬೇಕು ಎಂದು ಮನವಿ ಮಾಡಿದರು.

ಜೆಡಿಎಸ್ ಪಕ್ಷ ನಾಡಿನ ಜನರಿಗೆ ಉಚಿತ ಶಿಕ್ಷಣ, ಉಚಿತ ಆರೋಗ್ಯ,ರೈತರು ಸಾಲ ಮಾಡದ ಹಾಗೆ ಚೈತನ್ಯ, ಪ್ರತಿ ಕುಟುಂಬಕ್ಕೆ ಒಂದು ಮನೆ, ಯುವಕರಿಗೆ ಉದ್ಯೋಗ ಕಲ್ಪಿಸುವ ಪಂಚರತ್ನ ಕಾರ್ಯಕ್ರಮ ಜಾರಿಗೆ ತರಲು ಮುಂದಾಗಿದೆ‌.ಇದಕ್ಕಾಗಿ ನಾನು ಆರೋಗ್ಯವನ್ನು ಲೆಕ್ಕಿಸದೆ ಓಡಾಟ ನಡೆಸುತ್ತಿದ್ದೇನೆ. ಇದನ್ನು ಜನರು ಮನಗೊಂಡು ಜೆಡಿಎಸ್ ಪಕ್ಷಕ್ಕೆ ಆಶೀರ್ವಾದ ಮಾಡಬೇಕು ಎಂದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ 85 ರಿಂದ 90 ಸ್ಥಾನ ಗೆಲ್ಲುವುದಕ್ಕೆ ಯಾವುದೇ ಸಮಸ್ಯೆ ಇಲ್ಲ. ಈಗಾಗಲೇ ರಾಜ್ಯದ ಜನರು ನಮ್ಮ ಪರವಾಗಿ ಕೆಲಸ ಮಾಡುವ ಜೆಡಿಎಸ್ ಪಕ್ಷಕ್ಕೆ ಮತ ಕೊಡಬೇಕು ಎನ್ನುವುದರ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ. ಜನರ ಕಷ್ಟ-ಸುಖಗಳಿಗೆ ಸ್ಪಂದಿಸುವ ಸರ್ಕಾರ ಜೆಡಿಎಸ್ ನಿಂದ ಮಾತ್ರ ಸಾಧ್ಯ ಎಂದು ರಾಜ್ಯದ ಜನರು ಮಾತನಾಡುತ್ತಿದ್ದಾರೆ. ಜನರಿಗೂ ಕೂಡ ನಾವು ಈ ಬಾರಿ ತಪ್ಪು ಮಾಡಿದ್ದೇವೆ ಎಂಬ ಭಾವನೆ ಇದ್ದು,ಮುಂದಿನ ಚುನಾವಣೆಯಲ್ಲಿ ಜನರು ನಮ್ಮ ಪಕ್ಷಕ್ಕೆ ಆಶೀರ್ವಾದ ಮಾಡುವ ವಿಶ್ವಾಸವಿದೆ ಎಂದರು.

ಶಾಸಕ ಸುರೇಶ್ ಗೌಡ, ಮನ್ ಮುನ್ ಮುಲ್ ನಿರ್ದೇಶಕ ರವಿ ಕುಮಾರ್, ಜೆಡಿಎಸ್ ಮುಖಂಡರಾದ ಮುದ್ದನಘಟ್ಟ ಮಹಾಲಿಂಗೇಗೌಡ ಸೇರಿದಂತೆ ಹಲವರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!