ಸರ್ಕಾರಿ ಶಾಲಾ ಮಕ್ಕಳಿಗೆ ಸವಲತ್ತು ವಿತರಣೆ ಮಾಡುವ ಕಾರ್ಯ ಶ್ಲಾಘನೀಯ ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ಹರ್ಷ ವ್ಯಕ್ತಪಡಿಸಿದರು.
ಮಂಡ್ಯ ತಾಲೂಕಿನ ಇಂಡುವಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಸಮವಸ್ತ್ರ ಮತ್ತು ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ನೆರವೇರಿಸಿ ಅವರು ಮಾತನಾಡಿದರು.
ಇಂಡುವಾಳು ಗ್ರಾಮದ ಉದ್ಯಮಿ ಸಿದ್ದೇಗೌಡ ಅವರು, ಅಂಬುಜಾ ಮತ್ತು ಮಹೇಶ್ ಸ್ಮರಣಾರ್ಥ ಏರ್ಪಡಿಸಿದ್ದ ಸಮಾರಂಭವನ್ನು ಶಾಸಕ ರವೀಂದ್ರ ಶ್ರೀಕಂಠಯ್ಯ ಗಿಡಕ್ಕೆ ನೀರೆರೆಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರತಿ ಹೆಜ್ಜೆಯಲ್ಲೂ ವಿಭಿನ್ನವಾಗಿ ಯೋಚಿಸುವ ಹಾಗೂ ಗ್ರಾಮದ ಅಭಿವೃದ್ಧಿಗಾಗಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿರುವ ರಾಷ್ಟ್ರೀಯ ಯುವ ಪ್ರಶಸ್ತಿ ವಿಜೇತ ಸಿದ್ದೇಗೌಡ ಅವರ ಕಾರ್ಯ ಶ್ಲಾಘನೀಯವಾಗಿದ್ದು, ಇಂದಿನ ಕಾರ್ಯಕ್ರಮ ಬಹಳ ಅರ್ಥಪೂರ್ಣವಾಗಿದೆ ಎಂದರು.
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗಣ್ಯರು ಅಭಿನಂದನೆ ಸಲ್ಲಿಸಿ, ಶಾಲೆಯ ಎಲ್ಲ ಮಕ್ಕಳಿಗೂ ಸಮವಸ್ತ್ರ ವಿತರಣೆ ಮಾಡಿದರು.
ಕಾರ್ಯಕ್ರಮದ ಆಯೋಜಕ ಉದ್ಯಮಿ ಸಿದ್ದೇಗೌಡ ಮಾತನಾಡಿ, ಹಲವು ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ, ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳು ಗ್ರಾಮೀಣ ಪ್ರದೇಶದವರಾಗಿದ್ದು ಅವರಿಗೆ ಪ್ರೋತ್ಸಾಹ ಕೊಡುವ ನಿಟ್ಟಿನಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಹಲವು ವರ್ಷಗಳಿಂದ ಅಭಿನಂದಿಸಲಾಗುತ್ತಿದೆ. ಜೊತೆಗೆ ಸಮವಸ್ತ್ರ ವಿತರಣೆ ನೀಡಲಾಗಿದೆ.
ಮುಂದಿನ ದಿನಗಳಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮಾದರಿ ಶಾಲೆಯಾಗಿ ರೂಪಿಸಲು ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಸೋಮಶೇಖರ್, ಇಂಡುವಾಳು ಚಂದ್ರಶೇಖರ್, ಪಾಪಣ್ಣ, ದೇವರಾಜು, ನರಸಿಂಹಾಚಾರ್, ಕರೀಗೌಡ, ಪ್ರಸನ್ನ ಕುಮಾರ್, ರಮೇಶ್, ಚೆನ್ನಾಚಾರ್, ಪರಿಮಳ, ಬಸವರಾಜು, ಸೇರಿದಂತೆ ಇನ್ನಿತರರು ಹಾಜರಿದ್ದರು




