Friday, November 20, 2026

ಪ್ರಾಯೋಗಿಕ ಆವೃತ್ತಿ

ವಿದ್ಯಾರ್ಥಿಗಳಿಗೆ ಐಟಿ ರಸಪ್ರಶ್ನೆ ಕಾರ್ಯಕ್ರಮ

ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಮಂಡ್ಯ ನಗರದಲ್ಲಿ ಮಾಹಿತಿ ತಂತ್ರಜ್ಞಾನ (IT) ಕುರಿತ ರಸಪ್ರಶ್ನೆ ಕಾರ್ಯಕ್ರಮ ನಡೆಯಿತು.

ನಗರದ ಗಾಂಧಿಭವನದಲ್ಲಿ ಜರುಗಿದ ಈ ಕಾರ್ಯಕ್ರಮವನ್ನು ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ, ಮಾಹಿತಿ ತಂತ್ರಜ್ಞಾನ ಇಲಾಖೆ, ವಿಜ್ಞಾನ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದವು.

ಶಿಕ್ಷಣಾಧಿಕಾರಿ ಮಹೇಶ್ ಸಮಾರಂಭ ಉದ್ಘಾಟಿಸಿ ಮಾತನಾಡಿ, ಶಾಲಾ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರ ತರುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇಂದಿನ ದಿನಗಳಲ್ಲಿ ಮಕ್ಕಳಿಗೆ ತಂತ್ರಾಜ್ಞಾನ ಆಧಾರಿತ ಶಿಕ್ಷಣ ನೀಡುವುದು ಶಿಕ್ಷಣ ಇಲಾಖೆಯ ಉದ್ಧೇಶವಾಗಿದೆ ಎಂದರು.

ರಾಷ್ರೀಯ ಮಾಧ್ಯಮಿಕ ಶಿಕ್ಷಣದ ಉಪ ಯೋಜನಾಧಿಕಾರಿ ಟಿ.ಲಕ್ಷ್ಮಿ, ವಿಷಯ ಪರಿವೀಕ್ಷಕರಾದ ನಂಜರಾಜು, ನಾಗರಾಜು, ಜಾಕೀರ್‍ ಪಾಷ, ನೊಡೇಲ್ ಅಧಿಕಾರಿ ಎಸ್.ಲೋಕೇಶ್ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಪುಟ್ಟರಾಜು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ