Friday, November 20, 2026

ಪ್ರಾಯೋಗಿಕ ಆವೃತ್ತಿ

ಜನರೇ ನನಗೆ ಮಾರ್ಗದರ್ಶಕರು : ಬಿ.ಆರ್.ರಾಮಚಂದ್ರು


  • ಜನರೇ ನನಗೆ ಮಾರ್ಗದರ್ಶಕರು ಎಂದ ಶಂಭು ಸೇವಾ ಟ್ರಸ್ಟ್ ಅಧ್ಯಕ್ಷ ಬಿ.ಆರ್. ರಾಮಚಂದ್ರ
  •  ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್‌ಗಳನ್ನು ವಿತರಣೆ

ರೈತಾಪಿ ಕುಟುಂಬದಿಂದ ಬಂದ ನನಗೆ ರಾಜಕಾರಣದಲ್ಲಿ ಯಾರು ಗಾಡ್ ಫಾದರ್ ಇಲ್ಲ, ಜನರೇ ನನಗೆ ಮಾರ್ಗದರ್ಶಕರು ಎಂದು ಶಂಭು ಸೇವಾ ಟ್ರಸ್ಟ್ ಹಾಗೂ ಮನ್‌ಮುಲ್‌ ಅಧ್ಯಕ್ಷ ಬಿ.ಆರ್. ರಾಮಚಂದ್ರ ಹೇಳಿದರು.

ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ಶ್ರೀ ಶಂಭು ಸೇವಾ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ಕೆರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್‌ಗಳನ್ನು ವಿತರಿಸಿ ಮಾತನಾಡಿದ ಅವರು, ಜನರ ಸೇವಕನಾಗಿ ಕೆಲಸ ಮಾಡಲು ನಿಮ್ಮೆಲ್ಲರ ಸಹಕಾರ ಬೇಕೆಂದು ಮನವಿ ಮಾಡಿದರು.

ಬಡ ರೈತ ಕುಟುಂಬದ ಹುಡುಗನಿಂದ ಉದ್ಯಮ ಸ್ಥಾಪನೆ ಮಾಡಿಸಿ ಈ ಮಟ್ಟಕ್ಕೆ ಬೆಳೆಸಿದ್ದೀರಿ. ನನ್ನ ಬೆನ್ನಿಗೆ ನಿಂತು ಕೈ ಹಿಡಿದು ಬೆಳೆಸಿದ ನಿಮಗೆ ನಾನು ಆಭಾರಿ ಎಂದು ಸಂತಸ ವ್ಯಕ್ತಪಡಿಸಿದರು.

ಸರ್ಕಾರಿ ಶಾಲೆಗಳಲ್ಲಿರುವ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಶ್ರಮಿಸಬೇಕು. ಆಗ ಸರ್ಕಾರಿ ಶಾಲೆಗಳಲ್ಲಿ ಹಾಜರಾತಿ ಹೆಚ್ಚಳವಾಗುತ್ತದೆ ಎಂದು ಹೇಳಿದರು.

ವಿದ್ಯಾರ್ಥಿಗಳು ತಮ್ಮ ಜೀವನ ರೂಪಿಸಿಕೊಳ್ಳಬೇಕಾದರೆ ವಿದ್ಯಾಭ್ಯಾಸ ಬಹಳ ಮುಖ್ಯ.ಪೋಷಕರು ಮಕ್ಕಳನ್ನು ಕೂಲಿ ಮಾಡಿ ಓದಿಸುತ್ತಾರೆ, ಮಕ್ಕಳು ಇಷ್ಟಪಟ್ಟು ಓದಿ ಉನ್ನತ ಸ್ಥಾನಗಳನ್ನು ಅಲಂಕರಿಸಿದಾಗ ತಂದೆ ತಾಯಿಗಳು ಖುಷಿಪಡುತ್ತಾರೆ ಎಂದು ತಿಳಿಸಿದರು.

ಪ್ರಥಮ ದರ್ಜೆ ಗುತ್ತಿಗೆದಾರ ಹೆಚ್. ಡಿ.ಬಾಲರಾಜು ಮಾತನಾಡಿ ಶಂಭು ಸೇವಾ ಟ್ರಸ್ಟ್ ಅನೇಕ ಜನಪರ ಕೆಲಸಗಳನ್ನು ಮಾಡುತ್ತಿದೆ.ಜನಪರ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ನಿಮ್ಮೆಲ್ಲರ ಸಹಕಾರ ಮುಖ್ಯ ಎಂದರು.

ಕಾರ್ಯಕ್ರಮದಲ್ಲಿ ಮನ್ ಮುಲ್ ಉಪಾಧ್ಯಕ್ಷ ಎಂ.ಎಸ್. ರಘುನಂದನ್,ಮುಖ್ಯ ಶಿಕ್ಷಕ ದೊಡ್ಡ ಶೆಟ್ಟಿ ಗ್ರಾ.ಪಂ.ಸದಸ್ಯರಾದ ಆನಂದ್, ಮಹೇಶ್, ರಾಧಾ, ಶ್ರೇಯಸ್, ತಮ್ಮಣ್ಣಗೌಡ,ಶಂಭು ಸೇವಾ ಟ್ರಸ್ಟ್ ಕಾರ್ಯದರ್ಶಿ ಬಿ.ಆರ್. ಸುರೇಶ್ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ