Sunday, November 22, 2026

ಪ್ರಾಯೋಗಿಕ ಆವೃತ್ತಿ

ಶ್ರೀ ರಾಮ ಜನ್ಮಭೂಮಿ ಮಂದಿರದ ಅಂದಾಜು ವೆಚ್ಚ 1800 ಕೋಟಿ ರೂ.

ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯವಾದ ರಾಮಜನ್ಮಭೂಮಿ ಶ್ರೀ ರಾಮ ಮಂದಿರದ ಅಂದಾಜು ವೆಚ್ಚವನ್ನು ಎಲ್ಲಾ ಪರಿಷ್ಕರಣೆಯ ನಂತರ 1800 ಕೋಟಿ ರೂ.ಗಳಿಗೆ ನಿಗದಿಪಡಿಸಲಾಗಿದೆ.

ಶ್ರೀರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ನೇತೃತ್ವದಲ್ಲಿ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಸಭೆ ಭಾನುವಾರ ನಡೆಯಿತು. ನಂತರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ, ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು.

ಹಲವಾರು ಪರಿಷ್ಕರಣೆಗಳ ನಂತರ, ನಾವು ಈ ಅಂದಾಜನ್ನು ತಲುಪಿದ್ದೇವೆ. ಇದು ಕೂಡ ಹೆಚ್ಚಾಗಬಹುದು, ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕೂಡ, ಸಭೆಯಲ್ಲಿ ತನ್ನ ನಿಯಮಗಳು ಮತ್ತು ನಿಬಂಧನೆಗಳನ್ನು ಅಂತಿಮಗೊಳಿಸಿದೆ ಎಂದರು.

ಮಂದಿರದ ನಿರ್ಮಾಣವು ಡಿಸೆಂಬರ್ 2023 ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ, ಜನವರಿ 2024 ರ ಮಕರ ಸಂಕ್ರಾಂತಿ ಹಬ್ಬದ ವೇಳೆಗೆ ಶ್ರೀರಾಮನು ಗರ್ಭಗುಡಿಯಲ್ಲಿ ಆಸೀನರಾಗುವ ನಿರೀಕ್ಷೆಯಿದೆ ಎಂದು ತಿಳಿಸಿದರು.

ಸಭೆಯ ಮುನ್ನ ಟ್ರಸ್ಟ್‌ನ ಪಧಾಧಿಕಾರಿಗಳು ರಾಮ ಜನ್ಮಭೂಮಿ ಸಂಕೀರ್ಣದಲ್ಲಿ ಸ್ಥಳ ಪರಿಶೀಲನೆ ನಡೆಸಿದರು, ಇದುವರೆಗಿನ ನಿರ್ಮಾಣ ಪ್ರಗತಿಯನ್ನು ಪರಿಶೀಲಿಸಿದರು. ಕಟ್ಟಡ ನಿರ್ಮಾಣ ಸಮಿತಿಯ ಸಭೆಯು ಪ್ರತಿ ತಿಂಗಳು ನಡೆಯುತ್ತದೆ.

ರಾಮಮಂದಿರದ ‘ಗರ್ಭ ಗೃಹ’ ಅಥವಾ ದೇವಾಲಯದ ಗರ್ಭಗುಡಿಯ ನಿರ್ಮಾಣಕ್ಕೆ ಈ ವರ್ಷದ ಜೂನ್‌ನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಅಡಿಗಲ್ಲು ಹಾಕಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ