Saturday, November 21, 2026

ಪ್ರಾಯೋಗಿಕ ಆವೃತ್ತಿ

ಅನಕ್ಷರಸ್ಥರಿಗೆ ಅಕ್ಷರ ಕಲಿಸಿ : ಜವರೇಗೌಡ

ವಿದ್ಯಾರ್ಥಿಗಳು ತಮ್ಮ ಕುಟುಂಬದ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಬೇಕು ಎಂದು ಡಿಡಿಪಿಐ ಎಸ್‌.ಟಿ.ಜವರೇಗೌಡ ಸಲಹೆ ನೀಡಿದರು.

ಪೊಲೀಸ್‌ ಕಾಲೋನಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ಆವರಣದಲ್ಲಿ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಚೇರಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಮತ್ತು ಸಾಕ್ಷರತಾ ಸಪ್ತಾಹ ಉದ್ಘಾಟಿಸಿ ಮಾತನಾಡಿದರು.

ಹೆಬ್ಬೆಟ್ಟು ಹಾಕುವ ಮಂದಿಯನ್ನು ಹುಡುಕಿ ಅವರಿಗೆ ಅಕ್ಷರ ಕಲಿಸುವ ಹೊಣೆಗಾರಿಕೆಯೂ ಮನೆಯಲ್ಲಿರುವ ವಿದ್ಯಾವಂತರದ್ದಾಗಿದೆ, ಇದರಿಂದ ಮುಂದಿನ ದಿನಗಳಲ್ಲಿ ಸಾಕ್ಷರತೆ ಪ್ರಮಾಣವು ಶೇ.100 ರಷ್ಟು ತಲುಪುತ್ತದೆ.  ಗ್ರಾಮೀಣ ಭಾಗದಲ್ಲಿ ಅನಕ್ಷರಸ್ಥರನ್ನು ಗುರುತಿಸುವ ಗುರುತರ ಜವಾಬ್ದಾರಿ ಪ್ರತಿಯೊಬ್ಬ ಶಿಕ್ಷರ ಮೇಲೂ ಇದೆ ಎಂದರು.

ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಬಿ.ಚಂದ್ರಶೇಖರ್ ಮಾತನಾಡಿ, ಬಹುತೇಕ ವಿದ್ಯಾವಂತರಿಗೆ ಕಂಪ್ಯೂಟರ್‌ ಬಳಸಿಕೊಳ್ಳುವುದು ಗೊತ್ತಿಲ್ಲ, ಅದರ ಆಪರೇಟಿಂಗ್‌ ಸಿಸ್ಟಮ್‌ಗಳನ್ನು ಕಲಿತುಕೊಳ್ಳುವ ಬಗ್ಗೆ ಗಮನ ಹರಿಸಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಉಮೇಶ್‌, ಪ್ರಾಂಶುಪಾಲ ಮಹದೇವಸ್ವಾಮಿ, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಮಹೇಶ್‌, ಸಹ ಶಿಕ್ಷಕರಾದ ಕೆ.ಶಬಾನ ಹಾಗೂ ಮಮತಾ ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ