Friday, November 20, 2026

ಪ್ರಾಯೋಗಿಕ ಆವೃತ್ತಿ

ಕೇಂದ್ರೀಯ ವಿದ್ಯಾಲಯಕ್ಕೆ 25 ಕೋಟಿ ಬಿಡುಗಡೆ

ಮಂಡ್ಯ ಜಿಲ್ಲೆಯ ನೂತನ ಕೇಂದ್ರೀಯ ವಿದ್ಯಾಲಯ ಕಟ್ಟಡ ನಿರ್ಮಾಣಕ್ಕೆ ಕೇಂದ್ರದಿಂದ 25 ಕೋಟಿ ರೂ. ಅನುದಾನ ಬಿಡುಗಡೆಗೊಂಡಿದೆ ಎಂದು ಸಂಸದೆ ಸುಮಲತಾ ಅಂಬರೀಶ್ ತಿಳಿಸಿದರು.

ಮಂಡ್ಯ ತಾಲೂಕಿನ ಬಿ.ಹೊಸೂರು ಗ್ರಾಮದಲ್ಲಿರುವ ಕೇಂದ್ರೀಯ ವಿದ್ಯಾಲಯದಲ್ಲಿ ಕಟ್ಟಡ ನಿರ್ಮಾಣಕ್ಕೆ ಅನುಕೂಲವಾಗುವಂತೆ, ಕೇಂದ್ರೀಯ ವಿದ್ಯಾಲಯ ಶಾಲೆಯನ್ನು ಮೈಷುಗರ್ ಪ್ರೌಢಶಾಲೆಗೆ ಸ್ಥಳಾಂತರಿಸುವ ಸಂಬಂಧ ಜಿಲ್ಲಾಧಿಕಾರಿ, ಪ್ರಾಂಶುಪಾಲರು, CPWD ಅಧಿಕಾರಿಗಳು, ಮೈಷುಗರ್ ಹಳೆ ವಿದ್ಯಾರ್ಥಿಗಳ ಸಂಘದ ಸದಸ್ಯರು ಹಾಗೂ ಪೋಷಕರೊಂದಿಗೆ ಚರ್ಚಿಸಿದರು.

ಶಾಲೆಯ ಶೈಕ್ಷಣಿಕ ವ್ಯವಸ್ಥೆ, ಶಾಲೆಯ ತಾತ್ಕಾಲಿಕ ಸ್ಥಳಾಂತರ ಹಾಗೂ ಶಿಕ್ಷಕರ ಕೊರತೆ, ಕಟ್ಟಡ ನಿರ್ಮಾಣ ಕಾಮಗಾರಿಯ ಪ್ರಗತಿ ಸೇರಿದಂತೆ ಇನ್ನಿತರ ವಿಚಾರಗಳನ್ನು ಈ ಸಂದರ್ಭದಲ್ಲಿ ಚರ್ಚಿಸಲಾಯಿತು.

ಇದೇ ವೇಳೆ ಕೇಂದ್ರೀಯ ವಿದ್ಯಾಲಯ ಶಾಲೆಯನ್ನು ಮೈಷುಗರ್ ಪ್ರೌಢಶಾಲೆಗೆ ತಾತ್ಕಾಲಿಕವಾಗಿ ಸ್ಥಳಾಂತರಿಸಿದ ನಂತರ ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ಮೈಷುಗರ್ ಪ್ರೌಢಶಾಲೆಯಲ್ಲಿ ಶೌಚಾಲಯ ಹಾಗೂ ಶಾಲೆಯ ಕೊಠಡಿಗಳಲ್ಲಿ ಮೂಲಭೂತ ಸೌಕರ್ಯ ಮತ್ತು ಪೀಠೋಪಕರಣಗಳ ವ್ಯವಸ್ಥೆ ಕಲ್ಪಿಸಲು ಹೆಚ್ಚುವರಿ ಅನುದಾನದ ಅವಶ್ಯಕತೆ ಇದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ ಹಿನ್ನೆಲೆಯಲ್ಲಿ ಆ ಕೂಡಲೇ ಸಂಸದರ ನಿಧಿಯಿಂದ ಅವಶ್ಯವಿರುವ ಹೆಚ್ಚುವರಿ ಅನುದಾನವನ್ನು ನೀಡುವುದಾಗಿ ಸಂಸದರು ತಿಳಿಸಿದರು.

ನಂತರ ಕೇಂದ್ರೀಯ ವಿದ್ಯಾಲಯ ಶಾಲೆಯಲ್ಲಿ 23 ಜನ ಶಿಕ್ಷಕರ ಅವಶ್ಯಕತೆ ಇದ್ದು ಈ ಪೈಕಿ ಕೇವಲ 3ಜನ ಶಿಕ್ಷಕರು ಶಾಶ್ವತ ಹುದ್ದೆಯವರಾಗಿದ್ದು ಉಳಿದ 20 ಜನ ಶಿಕ್ಷಕರು ಗುತ್ತಿಗೆ ಆಧಾರದ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವುದನ್ನು ಮನಗಂಡು ಕೂಡಲೇ ಈ ಕುರಿತು ಕೇಂದ್ರ ಶಿಕ್ಷಣ ಸಚಿವರಿಗೆ ಪತ್ರದ ಮೂಲಕ ಗಮನಕ್ಕೆ ತರುವುದಾಗಿ ಹಾಗೂ ಈ ಬಾರಿಯ ಸಂಸತ್ ಅಧಿವೇಶನದಲ್ಲಿ ಈ ಕುರಿತು ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಸಭೆಗೆ ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅಶ್ವತಿ,ಉಪವಿಭಾಗಧಿಕಾರಿ ಐಶ್ವರ್ಯ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ